

ಬೆಂಗಳೂರು: ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕರ ಅಧ್ಯಕ್ಷತೆಯಲ್ಲಿ 12 ಮಂದಿಯನ್ನು ಒಳಗೊಂಡ ಇ-ಸ್ವತ್ತು ಕಾರ್ಯನಿರ್ವಹಣಾ ಸಮಿತಿ(Solution to e-asset problems: Committee of 12 officers formed) ರಚನೆ ಮಾಡಲಾಗಿದೆ.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 199ಕ್ಕೆ ತರಲು ಉದ್ದೇಶಿಸಿರುವ ತಿದ್ದುಪಡಿಗಳಿಗೆ ಅನುಗುಣವಾಗಿ ಇ-ಸ್ವತ್ತುಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಗಳಲ್ಲಿ ಉದ್ಭವಿಸುವ ಸಮಸ್ಯೆಗಳು ಹಾಗೂ ಸದರಿ ಸಮಸ್ಯೆಗಳ ಪರಿಹಾರದ ಭಾಗವಾಗಿ ಇ-ಸ್ವತ್ತು ಸುಧಾರಣೆಗೆ ಸಂಬಂಧಿಸಿದಂತೆ ಅಧ್ಯಯನ ಮಾಡಿ ವರದಿ ಸಲ್ಲಿಸುವ ಹೊಣೆಗಾರಿಕೆಯನ್ನು ಈ ಸಮಿತಿಗೆ ವಹಿಸಲಾಗಿದೆ.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯಿತಿಗಳ ಆಯವ್ಯಯ ಮತ್ತು ಲೆಕ್ಕಪತ್ರಗಳು) ನಿಯಮಗಳು 2006ರ ನಿಯಮ 28 ಮತ್ತು 30ಕ್ಕೆ ತಿದ್ದುಪಡಿ ತಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಕ್ರಮಬದ್ಧ ಆಸ್ತಿಗಳಿಗೆ ನಮೂನೆ-9, 11ಎ ಮತ್ತು ಕ್ರಮಬದ್ಧವಲ್ಲದ ಆಸ್ತಿಗಳಿಗೆ ನಮೂನೆ-11ಬಿ ಅನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಡಿಜಿಟಲ್ ಸಹಿಯ ಮೂಲಕ ವಿತರಿಸಲು ಅವಕಾಶ ಕಲ್ಪಿಸಲಾಗಿದೆ.
ಇ-ಸ್ವತ್ತು ಅನುಷ್ಠಾನದಲ್ಲಿ ಕಾಲಕಾಲಕ್ಕೆ ಎದುರಾಗುವ ಸಮಸ್ಯೆಗಳಿಗೆ ಸರ್ಕಾರದ ಮಟ್ಟದಲ್ಲಿ ಪರಿಹರಿಸಲು ಕ್ರಮಕೈಗೊಳ್ಳಲಾಗುತ್ತಿರುವ ತಿದ್ದುಪಡಿಗಳಿಗೆ ಅನುಗುಣವಾಗಿ ಎದುರಾಗುವ ಸಮಸ್ಯೆಗಳನ್ನು ಅಧ್ಯಯನ ಮಾಡಲು 12 ಮಂದಿ ಅಧಿಕಾರಿಗಳ ಸದಸಸ್ಯರನ್ನು ಒಳಗೊಂಡ ಈ ಸಮಿತಿಯನ್ನು ರಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ನಿರ್ದೇಶಕರು (ಅಭಿವೃದ್ಧಿ) ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ, ವಿಜಯ ಅಜೂರೆ, ಉಪಕಾರ್ಯದರ್ಶಿ ವಿಜಯಪುರ ಜಿಲ್ಲಾ ಪಂಚಾಯತಿ, ವಿಜಯಪುರ. ಶಿವಶಂಕರ್ ಪಿ, ಸದಸ್ಯರು, ಸೀಮಾ ನಿರ್ಣಯ ಆಯೋಗ, ಕೆ.ಜಿ.ಜಗದೀಶ್, ನಿವೃತ್ತ ಉಪನಿರ್ದೇಶಕರು, ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ, ಬಸವರಾಜು ಶರಬಯ್ಯ ಕಾರ್ಯನಿರ್ವಾಹಕ ಅಧಿಕಾರಿ, ಶಹಪುರ ತಾಲ್ಲೂಕು ಪಂಚಾಯಿತಿ ಕಲಬುರಗಿ ಜಿಲ್ಲೆ, ಆಶಾ ಎಂ.ಜೆ ಸಹಾಯಕ ನಿರ್ದೇಶಕರು (ಪಂ.ರಾಜ್) ನ್ಯಾಮತಿ ತಾಲ್ಲೂಕು ಪಂಚಾಯಿತಿ ದಾವಣಗೆರೆ ಜಿಲ್ಲೆ, ಸಿದ್ದರಾಜು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹೆನ್ನಾಗರ ಗ್ರಾಮ ಪಂಚಾಯಿತಿ ಆನೇಕಲ್ ತಾಲ್ಲೂಕು ಬೆಂಗಳೂರು ನಗರ ಜಿಲ್ಲೆ, ಪ್ರಭಾಕರ್‌ಎನ್. ಭಟ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿಂಧೋಳಿ ಗ್ರಾಮ ಪಂಚಾಯಿತಿ ಖಾನಾಪುರ ತಾಲ್ಲೂಕು ಬೆಳಗಾವಿ ಜಿಲ್ಲೆ, ಚಾಲುಕ್ಯ ಭಾರವಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೆ.ಬಿ. ಹಾಲ್ ಗ್ರಾಮ ಪಂಚಾಯಿತಿ ಚಿಕ್ಕಮಗಳೂರು ತಾಲೂಕು, ಚಿಕ್ಕಮಗಳೂರು ಜಿಲ್ಲೆ, ಯಶವಂತ ಬೆಳ್ಳಡ, ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಶಿರಾಡಿ ಸದಸ್ಯರು ಗ್ರಾಮ ಪಂಚಾಯಿತಿ, ಕಡಬ ತಾಲ್ಲೂಕು, ದಕ್ಷಿಣಕನ್ನಡ ಜಿಲ್ಲೆ. ಮಂಗಳೂರು. ಈ 10 ಮಂದಿ ಸಮಿತಿಯ ಸದಸ್ಯರಾಗಿದ್ದು ಉಪನಿರ್ದೇಶಕರು-6 (ಅಭಿವೃದ್ಧಿ), ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ, ಬೆಂಗಳೂರು ಇವರು ಸಮಿತಿಯ ಸದಸ್ಯ ಕಾರ್ಯದರ್ಶಿಗಳಾಗಿರುತ್ತಾರೆ.
ಈ ಸಮಿತಿ ಎರಡು ತಿಂಗಳೊಳಗೆ ವಿವರವಾದ ವರದಿಯೊಂದಿಗೆ ಇ-ಸ್ವತ್ತು ಸಲಹಾ ಸಮಿತಿಗೆ ಶಿಫಾರಸ್ಸು ಮಾಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತೆ ಡಾ.ಅರುಂಧತಿ ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.