ಮಧ್ಯಪ್ರದೇಶದಲ್ಲಿ ಹಳಿ ತಪ್ಪಿದ ರೈಲು..ನೆಲದ ಮೇಲೆ ಬಿದ್ದ ಸೋಮನಾಥ್ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳು!

rail (1)
Published on

ಭೋಪಾಲ್: ಮಧ್ಯಪ್ರದೇಶದ ಜಬಲ್‌ಪುರದಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ಸೋಮನಾಥ್ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳು ಹಳಿತಪ್ಪಿವೆ. ನಿಲ್ದಾಣದಿಂದ 150 ಮೀಟರ್ ದೂರದಲ್ಲಿ ಬೆಳಗ್ಗೆ 5.50ಕ್ಕೆ ಈ ಅಪಘಾತ ಸಂಭವಿಸಿದೆ.

ಇಂದೋರ್-ಜಬಲ್‌ಪುರ್ ಎಕ್ಸ್‌ಪ್ರೆಸ್ ರೈಲು (22191) "ಡೆಡ್ ಸ್ಟಾಪ್ ಸ್ಪೀಡ್" ನಲ್ಲಿ ಹಳಿತಪ್ಪಿತು.

ಜಬಲ್‌ಪುರ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್ ಸಂಖ್ಯೆ 6 ರ ಸಮೀಪಕ್ಕೆ ಬರುತ್ತಿದ್ದಂತೆ, ಮುಂಭಾಗದ ಎರಡು ಬೋಗಿಗಳು ಹಳಿತಪ್ಪಿವೆ. ರೈಲು ಇಂದೋರ್‌ನಿಂದ ಬರುತ್ತಿತ್ತು,

ತಿಂಗಳ ಹಿಂದೆ ಉತ್ತರ ಪ್ರದೇಶದ ಕಾನ್ಪುರ ರೈಲು ನಿಲ್ದಾಣದ ಬಳಿ ಅಹಮದಾಬಾದ್-ವಾರಣಾಸಿ ಸಬರಮತಿ ಎಕ್ಸ್‌ಪ್ರೆಸ್‌ನ 20 ಬೋಗಿಗಳು ಹಳಿತಪ್ಪಿದ್ದವು. ಇದಾದ ಬಳಿಕ ಈಗ ಜಬಲ್‌ಪುರ ರೈಲು ಅಪಘಾತ ಸಂಭವಿಸಿದೆ. ಹಳಿ ಮೇಲೆ ಕಲ್ಲು ಬಿದ್ದಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಜುಲೈ 30 ರಂದು, ಹೌರಾ-ಮುಂಬೈ ಸಿಎಸ್‌ಎಂಟಿ ಮೇಲ್‌ನ 18 ಟ್ರ್ಯಾಕ್‌ಗಳು ಜಾರ್ಖಂಡ್‌ನ ಜಮ್‌ಶೆಡ್‌ಪುರ ಬಳಿ ಹಳಿತಪ್ಪಿದವು. ಈ ಅವಘಡದಲ್ಲಿ ಇಬ್ಬರು ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಇದಲ್ಲದೇ ದೇಶಾದ್ಯಂತ ಪದೇ ಪದೇ ರೈಲು ಅಪಘಾತಗಳು ಸಂಭವಿಸುತ್ತಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net