

ಬೆಂಗಳೂರು: ಆಸ್ತಿ ವಿಚಾರಕ್ಕೆ ಹೆತ್ತ ತಾಯಿಯನ್ನು ಮಗ ಮತ್ತು ಸೊಸೆ ಹತ್ಯೆಗೈದ ಘಟನೆ ಇದೀಗ ಬೆಂಗಳೂರಿನ ದೇವನಹಳ್ಳಿಯಲ್ಲಿ ವರದಿಯಾಗಿದೆ.
ಬೆಂಗಳೂರಿನ ದೇವನಹಳ್ಳಿಯ ಯತ್ತಿಗನಹಳ್ಳಿ ಬಳಿ ಈ ಘಟನೆ ಸಂಭವಿಸಿದ್ದು, ಆಸ್ತಿ ವಿಚಾರಕ್ಕೆ ತಾಯಿಯನ್ನು ಮಗ ಮತ್ತು ಸೊಸೆ ಸೇರಿಕೊಂಡು ಹತ್ಯೆಗೈದಿದ್ದಾರೆ ಎಂದು ವರದಿ ತಿಳಿಸಿದೆ. ಕೊಲೆಯಾದ ಮಹಿಳೆಯನ್ನು ಚಿನ್ಮಮ್ಮ (60) ಎಂದು ಗುರುತಿಸಲಾಗಿದ್ದು, ಆರೋಪಿಗಳು
ದೊಣ್ಣೆಯಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮೃತ ಮಹಿಳೆಯ ಪುತ್ರ ರಾಘವೇಂದ್ರ ಮತ್ತು ಸೊಸೆ ಸುಧಾ ಹತ್ಯೆಯ ಆರೋಪಿಗಳು! ಸದ್ಯ ಇಬ್ಬರನ್ನು ಇದೀಗ ದೇವನಹಳ್ಳಿ ಪೊಲೀಸರು ಬಂಧಿಸಿದ್ದು, ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.