ಹೆತ್ತತಾಯಿಯನ್ನು ಭೀಕರವಾಗಿ ಹತ್ಯೆ ಮಾಡಿ, ತಂದೆಯನ್ನು ಗಾಯಗೊಳಿಸಿದ ಮಗ

Murder Crime
Published on

ಥಾಣೆ: 31 ವರ್ಷದ ವ್ಯಕ್ತಿಯೊಬ್ಬ ತನ್ನ ತಾಯಿಯನ್ನು ಭೀಕರವಾಗಿ ಹತ್ಯೆ ಮಾಡಿ, ತಂದೆಯನ್ನು ಗಂಭೀರವಾಗಿ ಗಾಯಗೊಳಿಸಿರುವ ಘಟನೆ ನಡೆದಿದೆ. ಈ ದುರ್ಘಟನೆ ಮಹಾರಾಷ್ಟ್ರದ ಥಾಣೆ ನಗರದಲ್ಲಿ ನಡೆದಿದ್ದು, ಮೃತ ಮಹಿಳೆಯನ್ನು ವಿನಿತಾ ಭಟ್ಕರ್(66) ಎಂದು ಗುರುತಿಸಲಾಗಿದೆ.

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ನಡೆದ ಘಟನೆ ಇದಾಗಿದ್ದು, ಮೃತ ಮಹಿಳೆ ವಿನಿತಾ ತನ್ನ ಪತಿಯೊಂದಿಗೆ ಕೊಪ್ರಿ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಗುರುವಾರ ಜಗಳವಾಡುವ ಸಂದರ್ಭದಲ್ಲಿ ಸಿಟ್ಟಿಗೆದ್ದ ಆರೋಪಿಯು, ಮಧ್ಯಾಹ್ನ 12 ಗಂಟೆ ಸುಮಾರಿಗೆ ಅಡುಗೆ ಮನೆಯ ಚಾಕುವಿನಿಂದ ಪೋಷಕರ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಾಕುವಿನಿಂದ ಮೊದಲು ತನ್ನ ತಾಯಿಯನ್ನು ಇರಿದು ಕೊಂದ ಆರೋಪಿಯು, ನಂತರ ತಂದೆಯನ್ನು ಗಂಭೀರವಾಗಿ ಗಾಯಗೊಳಿಸಿದ್ದಾನೆ. ಘಟನೆಯ ನಂತರ ಆರೋಪಿಯು ಪರಾರಿಯಾಗಿದ್ದು, ಈತನಿಗಾಗಿ ಪೋಲಿಸರು ಬಲೆ ಬೀಸಿದ್ದಾರೆ. ಆರೋಪಿಯ ಗುರುತು ಹಾಗೂ ಗಾಯಾಳುವಿನ ಗುರುತು ತಿಳಿದು ಬಂದಿಲ್ಲ.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net