

ನವದೆಹಲಿ: ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸೋನಿಯಾ ಗಾಂಧಿ ಅವರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗುರುವಾರದಂದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 76 ವರ್ಷದ ಸೋನಿಯಾ ಗಾಂಧಿಯವರು ನವದೆಹಲಿಯ ಗಂಗಾ ರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯ ಅರುಪ್ ಬಸು ಮತ್ತು ಅವರ ತಂಡ ಸೋನಿಯಾ ಅವರಿ ತಪಾಸಣೆ ನಡೆಸುತ್ತಿದೆ.
ಇಂದು ಗಂಗಾರಾಮ್ ಆಸ್ಪತ್ರೆಯ ಚೇರ್ಮನ್ ಡಾ. ಡಿ.ಎಸ್ ರಾಣಾ ಈ ಕುರಿತಂತೆ ಮಾಹಿತಿ ನೀಡಿದ್ದು, ಸೋನಿಯಾ ಗಾಂಧಿಯವರ ಆರೋಗ್ಯ ಸ್ಥಿರವಾಗಿದೆ. ಅವರು ಜ್ವರಿದಂದ ಬಳಲುತ್ತಿದ್ದಾರೆ. ಕಳವಳಪಡಬೇಕಾದ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಸೋನಿಯಾ ಗಾಂಧಿ ಅವರು ಈ ವರ್ಷ ಆಸ್ಪತ್ರೆಗೆ ದಾಖಲಾಗುತ್ತಿರುವುದು ಇದು ಎರಡನೇ ಬಾರಿ. ಜನವರಿಯಲ್ಲಿ ಸೋನಿಯಾ ಗಾಂಧಿಯವರು ಉಸಿರಾಟ, ಸೋಂಕಿನ ಚಿಕಿತ್ಸೆಗಾಗಿ ದೆಹಲಿಯ ಆಸ್ಪತ್ರೆಗೆ ದಾಖಲಾಗಿದ್ದರು.