ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

Sonia Gandhi
Published on

ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಬುಧವಾರ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಮಂಗಳವಾರ ಏರುಪೇರಾಗಿದೆ. ಹಾಗಾಗಿ ಸಾಮಾನ್ಯ ತಪಾಸಣೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಾಯಿ ಜತೆ ಪ್ರಿಯಾಂಕ ಗಾಂಧಿ ಆಸ್ಪತ್ರೆಗೆ ಆಗಮಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್​ನ ನಾಯಕಿ ಶ್ರೀಮತಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುದ್ದಿ ಕೇಳಿ ಬೇಸರವಾಯಿತು. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಮತ್ತು ಆರೋಗ್ಯವಾಗಿ ಮರಳಲಿ ಎಂದು ದೇವರದಲ್ಲಿ ಪ್ರಾರ್ಥಿಸುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net