ಸೋಂಕಿನ ಮಾದರಿ ಕೊಟ್ಟು ಅಡ್ಡಾಡುವಂತಿಲ್ಲ: ಏನಿದು ಹೊಸ ಆದೇಶ?

corona new
Published on

ಬೆಂಗಳೂರು: ಕರೊನಾ ವೈರಸ್‌ ಕ್ಷಣ ಕ್ಷಣಕ್ಕೂ ಏರುತ್ತಿರುವ ಹಿನ್ನೆಲೆಯಲ್ಲಿ, ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಹೊಸ ಆದೇಶವನ್ನು ಹೊರಡಿಸಿದೆ.

ಅದರ ಪ್ರಕಾರ, ಕರೊನಾ ವೈರಸ್ ಸೋಂಕಿನ ಪರೀಕ್ಷೆಗೆ ಮಾದರಿ ಕೊಟ್ಟಿರುವ ಜನರು ಸಹ ಐಸೋಲೇಷನ್‌ನಲ್ಲಿ ಇರುವುದು ಕಡ್ಡಾಯ ಎಂದು ಹೇಳಲಾಗಿದೆ. ಇದನ್ನು ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಇಲಾಖೆ ಎಚ್ಚರಿಸಿದೆ.

ಕರೊನಾ ವೈರಸ್‌ ಸೋಂಕಿನ ಪರೀಕ್ಷೆಗೆ ಮಾದರಿ ಕೊಟ್ಟ ನಂತರ ಅದರ ಫಲಿತಾಂಶ ಬರುವವರೆಗೂ ಜನರು ಎಲ್ಲೆಡೆ ಅಡ್ಡಾಡುತ್ತಿರುವ ಹಿನ್ನೆಲೆಯಲ್ಲಿ, ಸೋಂಕು ಇತರರಿಗೂ ತಗಲುತ್ತಿರುವ ಬಗ್ಗೆ ಎಚ್ಚೆತ್ತುಕೊಂಡಿರುವ ಇಲಾಖೆ ಇಂಥದ್ದೊಂದು ಆದೇಶ ಹೊರಡಿಸಿದೆ.

ಒಂದು ವೇಳೆ ಮಾದರಿ ಕೊಟ್ಟಿರುವ ವ್ಯಕ್ತಿ ಫಲಿತಾಂಶ ಬರುವುದಕ್ಕೂ ಮೊದಲು ಸಾರ್ವಜನಿಕ ಸ್ಥಳದಲ್ಲಿ ಸಂಚಾರ ನಡೆಸುವುದು, ಕಚೇರಿಗೆ ಹೋಗುವುದು, ಅನಗತ್ಯವಾಗಿ ತಿರುಗಾಡುವುದನ್ನು ಮಾಡುವಂತಿಲ್ಲ ಎಂದು ಆರೋಗ್ಯ ಇಲಾಖೆ ಹೇಳಿದೆ.

ಒಂದು ವೇಳೆ ವೈರಸ್‌ ಫಲಿತಾಂಶ ಬರುವುದಕ್ಕೂ ಮೊದಲು ನಿಯಮ ಮೀರಿದರೆ ಸಾಂಕ್ರಾಮಿಕ ರೋಗಗಳ ಕಾಯ್ದೆ 1897ರ ಅನ್ವಯ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮಗಳನ್ನಯ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net