ಬಾಲಕಿ ದತ್ತು ಪಡೆದ ಕೇಸ್‌ನಲ್ಲಿ ಸೋನು ಗೌಡಗೆ ಜಾಮೀನು

sonu
Published on

ಬೆಂಗಳೂರು: ಕಾನೂನು ಬಾಹಿರವಾಗಿ ಮಗು ದತ್ತು ಪಡೆದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಬಿಗ್‌ಬಾಸ್ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡಗೆ ಬೆಂಗಳೂರು ಗ್ರಾಮಾಂತರ ಪ್ರಧಾನ ಜಿಲ್ಲಾ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಇತ್ತೀಚೆಗೆ ಮಗು ದತ್ತು ಪಡೆದ ಪ್ರಕರಣದಲ್ಲಿ ಬ್ಯಾಡರಹಳ್ಳಿ ಪೊಲೀಸರು ಸೋನು ಗೌಡ ಬಂಧಿಸಿ, ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇದೇ ವೇಳೆ ಸೋನುಗೌಡ ಪರ ವಕೀಲರು, ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಇಬ್ಬರು ಶ್ಯೂರಿಟಿ, 1 ಲಕ್ಷ ರೂ. ಬಾಂಡ್‌ನ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದೆ.

ರಾಯಚೂರು ಜಿಲ್ಲೆ ಕಾಚಾಪುರದ ಬಾಲಕಿಯನ್ನು ದತ್ತು ಪಡೆದು ಸೋನು ಗೌಡ ರೀಲ್ಸ್ ಮಾಡಿದ್ದರು. ಇದನ್ನು ಗಮನಿಸಿದ ಮಕ್ಕಳ ರಕ್ಷಣಾ ಸಮಿತಿ, ಬ್ಯಾಡರಹಳ್ಳಿ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಪ್ರಕರಣ ದಾಖಲು ಮಾಡಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net