

Sourav Ganguly : ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಅವರ ಜೀವನ ಚರಿತ್ರೆಯನ್ನು ಆಧರಿಸಿದ ಸಿನಿಮಾವನ್ನು ಬಾಲಿವುಡ್‌ನಲ್ಲಿ ಮಾಡುವ ಕುರಿತಾಗಿ ಬಗ್ಗೆ ಬಹಳ ದಿನಗಳಿಂದ ಮಾತುಕತೆ ನಡೆಯುತ್ತಿತ್ತು. ಬಾಲಿವುಡ್ ಸ್ಟಾರ್ ಹೀರೋ ತಮ್ಮ ಜೀವನ ಚರಿತ್ರೆಯಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ಗಂಗೂಲಿ ಸ್ವತಃ ಕೆಲವು ದಿನಗಳ ಹಿಂದೆ ಘೋಷಿಸಿದ್ದಾರೆ.
ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಸೌರವ್ ಗಂಗೂಲಿ, ಜೀವನ ಚರಿತ್ರೆಯನ್ನು ಸಿನಿಮಾ ಮಾಡುವ ಸಂಬಂಧಿಸಿ ಕೆಲಸಗಳು ಪ್ರಾರಂಭವಾಗಿವೆ. 2026ರಿಂದ ಚಿತ್ರೀಕರಣ ಪ್ರಾರಂಭವಾಗಲಿದೆ. ಅಷ್ಟೇ ಅಲ್ಲ, ಪ್ರಸಿದ್ಧ ಬಾಲಿವುಡ್ ನಟ ರಾಜ್‌ಕುಮಾರ್ ರಾವ್ ಅವರ ಜೀವನ ಚರಿತ್ರೆಯಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ಗಂಗೂಲಿ ಸ್ವತಃ ಹೇಳಿದ್ದಾರೆ.
ಸ್ಕ್ರಿಪ್ಟ್ ಕೆಲಸ ಮುಗಿದ ತಕ್ಷಣ ಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದೆ. ಚಿತ್ರೀಕರಣ ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ, ಆದರೆ ಪೋಸ್ಟ್-ಪ್ರೊಡಕ್ಷನ್ ಕೆಲಸಗಳು ಸಮಯ ತೆಗೆದುಕೊಳ್ಳಬಹುದು. ಮುಂದಿನ ವರ್ಷ ಡಿಸೆಂಬರ್‌ನಲ್ಲಿ ತಮ್ಮ ಜೀವನ ಚರಿತ್ರೆ ಬಿಡುಗಡೆಯಾಗಲಿದೆ ಎಂದು ಗಂಗೂಲಿ ತಿಳಿಸಿದ್ದಾರೆ.
ವಿಕ್ರಮಾದಿತ್ಯ ಮೋಟ್ವಾನಿ ಸೌರವ್ ಗಂಗೂಲಿ ಜೀವನಚರಿತ್ರೆ ಚಿತ್ರವನ್ನು ನಿರ್ದೇಶಿಸಲಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಶೀಘ್ರದಲ್ಲೇ ಸ್ಪಷ್ಟನೆ ಬರಲಿದೆ.
ಗಂಗೂಲಿ ಟೀಮ್ ಇಂಡಿಯಾ ಪರ 113 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಏಕದಿನ ಕ್ರಿಕೆಟ್‌ನಲ್ಲಿ 311 ಪಂದ್ಯಗಳನ್ನು ಆಡಿದ್ದಾರೆ. ಭಾರತೀಯ ಕ್ರಿಕೆಟ್ ತಂಡದ ನಾಯಕ ಮತ್ತು ಆಟಗಾರನಾಗಿ ಸೇವೆ ಸಲ್ಲಿಸಿದ ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.