

ಶಿವಮೊಗ್ಗ: ಕರ್ನಾಟಕ ಮಹಿಳಾ ನ್ಯಾಯವಾದಿಗಳ ಒಕ್ಕೂಟ, ಶಿವಮೊಗ್ಗ ಜಿಲ್ಲಾ ಮಹಿಳಾ ನ್ಯಾಯವಾದಿಗಳ ಸಮಿತಿ ಮತ್ತು ಜಿಲ್ಲಾ ನ್ಯಾಯವಾದಿಗಳ ಸಂಘದ ಆಶ್ರಯದಲ್ಲಿ ದಕ್ಷಿಣ ಕರ್ನಾಟಕ ಮಹಿಳಾ ನ್ಯಾಯವಾದಿಗಳ ಸಮ್ಮೇಳನವನ್ನು ಆ.10ರಂದು ಬೆಳಗ್ಗೆ 10ಕ್ಕೆ ಸರ್ಕಾರಿ ನೌಕರರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಮಹಿಳಾ ನ್ಯಾಯವಾದಿಗಳ ಸಮಿತಿ ಅಧ್ಯಕ್ಷೆ ಸರೋಜಾ ಪಿ. ಚಂಗೊಳ್ಳಿ ಹೇಳಿದರು.
2005ರಲ್ಲಿ ಶಿವಮೊಗ್ಗದಲ್ಲಿ ಮಹಿಳಾ ನ್ಯಾಯವಾದಿಗಳ ಪ್ರಾಂತೀಯ ಸಮ್ಮೇಳನ ನಡೆದಿತ್ತು. ಇದೀಗ 2ನೇ ಸಮ್ಮೇಳನ ಆಯೋಜನೆಗೊಂಡಿದ್ದು, ಸುಮಾರು 700ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸುವರು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ರಾಜ್ಯದಲ್ಲಿ 20 ಸಾವಿರಕ್ಕೂ ಹೆಚ್ಚು ಮಹಿಳಾ ವಕೀಲರಿದ್ದು, ಅವರ ಹಿತರಕ್ಷಣೆ, ಕಾರ್ಯದಕ್ಷತೆ ಹೆಚ್ಚಿಸುವುದು. ಅವರಿಗೆ ಸಿಗಬೇಕಾದ ಸ್ಥಾನಮಾನ, ಅವಕಾಶ ಸಿಗುವಂತೆ ನೋಡಿಕೊಳ್ಳುವುದು ೆಡರೇಶನ್‌ನ ಆದ್ಯತೆ ಎಂದರು.
ಹೈಕೋರ್ಟ್ ನ್ಯಾಯಮೂರ್ತಿ ಬಿ.ಎಂ.ಶ್ಯಾಮ್‌ಪ್ರಸಾದ್ ಸಮ್ಮೇಳನ ಉದ್ಘಾಟಿಸುವರು. ಹೈಕೋರ್ಟ್ ನ್ಯಾಯಮೂರ್ತಿ ಎಂ.ಜಿ.ಉಮಾ, ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮಂಜುನಾಥ ನಾಯ್ಕ, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಶಾರದಾ ಪೂರ‌್ಯಾನಾಯ್ಕಾ, ೆಡರೇಷನ್‌ನ ಅಧ್ಯಕ್ಷೆ ಶೀಲಾ ಅನೀಶ್, ಡಿಸಿ ಗುರುದತ್ತ ಹೆಗಡೆ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಜಿ.ಆರ್.ರಾಘವೇಂದ್ರ ಸ್ವಾಮಿ, ರಾಜ್ಯ ಮಹಿಳಾ ನ್ಯಾಯವಾದಿಗಳ ಒಕ್ಕೂಟದ ಅಧ್ಯಕ್ಷೆ ಸಂಧ್ಯಾ ಬಸವರೆಡ್ಡಿ ಪಾಲ್ಗೊಳ್ಳುವರು. ಒಕ್ಕೂಟದ ಅಧ್ಯಕ್ಷೆ ಹೇಮಲತಾ ಮಹಿಷಿ ಅಧ್ಯಕ್ಷತೆ ವಹಿಸುವರು ಎಂದರು.
ಸಂಜೆ 4ಕ್ಕೆ ಸಮಾರೋಪದಲ್ಲಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ, ಎಸ್ಪಿ ಜಿ.ಕೆ.ಮಿಥುನ್‌ಕುಮಾರ್, ಪಾಲಿಕೆ ಆಯುಕ್ತೆ ಡಾ. ಕವಿತಾ ಯೋಗಪ್ಪನವರ್ ಭಾಗವಹಿಸುವರು ಎಂದು ಹೇಳಿದರು.
ವಕೀಲರ ಸಂಘದ ಜಿಲ್ಲಾಧ್ಯಕ್ಷ ಜಿ.ಆರ್.ರಾಘವೇಂದ್ರ ಸ್ವಾಮಿ, ಪ್ರಧಾನ ಕಾರ್ಯದರ್ಶಿ ಎ.ಎಸ್.ಶ್ರೀನಿವಾಸ, ಜಿಲ್ಲಾ ಮಹಿಳಾ ನ್ಯಾಯವಾದಿಗಳ ಒಕ್ಕೂಟದ ಪದಾಧಿಕಾರಿಗಳಾದ ಎಚ್.ಎಂ.ರೇಣುಕಮ್ಮ, ಎಸ್.ಆರ್.ನಂದಿನಿ ದೇವಿ, ಕಿಲಕಾ ಮಧುಸೂದನ್, ಪೂರ್ಣಿಮಾ, ಪ್ರಮೀಳಾ, ಅಶ್ವಿನಿ, ರೇಖಾ, ವಿದ್ಯಾರಾಣಿ ಸುದ್ದಿಗೋಷ್ಠಿಯಲ್ಲಿದ್ದರು.