

ನವದೆಹಲಿ: RRR ಸಿನಿಮಾದ ಹಾಡು ನಾಟು ನಾಟು ಪ್ರಪಂಚದಾದ್ಯಂತ ಸಂಚಲನವನ್ನು ಸೃಷ್ಟಿಸಿದೆ. ಸಿನಿಮಾ ಬಿಡುಗಡೆಯಾದಾಗಿನಿಂದಲೂ ರೀಲ್ಸ್ ಮೂಲಕ ದೊಡ್ಡ ಮಟ್ಟದ ಜನಪ್ರಿಯತೆಯನ್ನು ಪಡೆದುಕೊಂಡಿತ್ತು. ವಿವಿಧ ಕ್ಷೇತ್ರಗಳ ಗಣ್ಯರು ಕೂಡ ನಾಟು ನಾಟು ಹಾಡಿಗೆ ಹೆಜ್ಜೆ ಹಾಕಿದ್ದರು. ಈ ವೀಡಿಯೋಗಳು ಸಾಮಾಜಿಕ ಜಾಲತಾಣಲದಲ್ಲಿ ಟ್ರೆಂಡಿಂಗ್ ಪಡೆದುಕೊಂಡಿತ್ತು.
ಇದೀಗ ಭಾರತದ ದಕ್ಷಿಣ ಕೊರಿಯಾ ರಾಯಭಾರ ಕಚೇರಿ ಅಧಿಕಾರಿಗಳು ನಾಟು ನಾಟು ಹಾಡಿಗೆ ಡ್ಯಾನ್ಸ್ ಮಾಡಿದ್ದಾರೆ. ಈ ವೀಡಿಯೋ ಭಾರತದ ಕೊರಿಯಾ ರಾಯಭಾರ ಕಚೇರಿಯ ಟ್ವಿಟರ್ ಖಾತೆಯಲ್ಲಿ ಅಪ್ಲೋಡ್ ಆಗುತ್ತಿದ್ದಂತೆ ಸಾಕಷ್ಟು ವೈರಲ್ ಆಗಿದೆ. ಇದೀಗ ಇವರ ನೃತ್ಯ ಪ್ರಧಾನಿ ನರೇಂದ್ರ ಮೋದಿಯ ಅವರ ಗಮನ ಸೆಳೆದಿದೆ.
ಕೊರಿಯ ರಾಯಭಾರಿ ಚಾಂಗ್ ಜೆ ಬೊಕ್ ಸಹ ತಮ್ಮ ಕಚೇರಿಯ ಅಧಿಕಾರಿಗಳೊಂದಿಗೆ ನಾಟು ನಾಟು ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಇದೀಗ ಈ ವೀಡಿಯೋವನ್ನು ಪ್ರಧಾನಿ ಮೋದಿ ಹಂಚಿಕೊಂಡು ಸಂಪೂರ್ಣ ತಂಡದ ಪರಿಶ್ರಮಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.
ಭಾರತದ ದಕ್ಷಿಣ ಕೊರಿಯಾ ರಾಯಭಾರಿ ಕಚೇರಿ ಅಧಿಕಾರಿಗಳ ನಾಟು ನಾಟು ಹಾಡಿನ ಡ್ಯಾನ್ಸ್ ವೀಡಿಯೋ ಟ್ವಿಟರ್ನಲ್ಲಿ ಟ್ರೆಂಡಿಂಗ್ನಲ್ಲಿದ್ದು ಈಗಾಗಲೇ 5 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿದ್ದಾರೆ.