ಕರ್ನಾಟಕ ಕ್ಯಾನ್ಸರ್ ಇನ್​ಸ್ಟಿಟ್ಯೂಟ್​ಗೆ ವಿಶೇಷ ನೆರವು; ಡಾ.ಸಂಕೇಶ್ವರ ಅವರ ಮನವಿಗೆ ಸ್ಪಂದಿಸಿದ ಸಿಎಂ

Sankeshwara
Published on

ಸಾಮಾಜಿಕ ಸೇವಾ ವಲಯದಲ್ಲಿ ಉತ್ತಮ ಕೆಲಸ ಮಾಡುತ್ತಿರುವ ಧಾರವಾಡದ ಕರ್ನಾಟಕ ಕ್ಯಾನ್ಸರ್ ಇನ್​ಸ್ಟಿಟ್ಯೂಟ್​ಗೆ ವಿಶೇಷ ನೆರವು ನೀಡುವುದಾಗಿ ಬಜೆಟ್​ನಲ್ಲಿ ಘೋಷಿಸಲಾಗಿದೆ. ವಿಆರ್​ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ ಸಂಕೇಶ್ವರ ಅವರ ನೇತೃತ್ವದ ನಿಯೋಗವು ಈ ಹಿಂದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರನ್ನು ಭೇಟಿ ಮಾಡಿತ್ತು.

44 ವರ್ಷಗಳಿಂದ 1.50 ಲಕ್ಷಕ್ಕೂ ಅಧಿಕ ಜನರಿಗೆ ಕ್ಯಾನ್ಸರ್ ಚಿಕಿತ್ಸೆ ನೀಡುವ ಮೂಲಕ ಉತ್ತರ ಕರ್ನಾಟಕ ಭಾಗದ ಜನರಿಗೆ ಜೀವ ಸಂಜೀವಿನಿಯಾಗಿರುವ ಕರ್ನಾಟಕ ಕ್ಯಾನ್ಸರ್ ಥೆರಪಿ ಮತ್ತು ಸಂಶೋಧನಾ ಸಂಸ್ಥೆಯ ಕಾಯಕಲ್ಪಕ್ಕೆ ಸರ್ಕಾರ ಮುಂದಾಗಬೇಕು ಎಂದು ಅಂದು ಮನವಿ ಮಾಡಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net