ದೇವಸ್ಥಾನಗಳಲ್ಲಿ ವಿಶೇಷ ಗೋಪೂಜೆ: ಆದೇಶ | Deepawali festival special

IMG20210319124017-scaled
Published on

ಬೆಂಗಳೂರು: ಹಬ್ಬ-ಹರಿದಿನಗಳಲ್ಲಿ ಮುಜರಾಯಿ ಇಲಾಖೆ ವ್ಯಾಪ್ತಿ ದೇವಸ್ಥಾನಗಳಲ್ಲಿ ಆಯಾ ಹಬ್ಬಕ್ಕೆ ಅನುಗುಣವಾಗಿ ವಿಶೇಷ ಪೂಜೆ ಸಲ್ಲಿಸಲು ಸೂಚಿಸಲಾಗಿದೆ. ಅದರಂತೆ ಬಲಿಪಾಢ್ಯಮಿ (ದೀಪಾವಳಿ) ನಿಮಿತ್ತ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷವಾಗಿ ಗೋಪೂಜೆ ನೆರವೇರಿಸಲು ಇಲಾಖೆ ಆದೇಶಿಸಿದೆ.

ಹಿಂದು ಧರ್ಮದಲ್ಲಿ ಗೋವಿಗೆ ಗೋಮಾತೆ ಎಂಬ ಹೆಸರಿನಿಂದ ವಿಶೇಷ ಸ್ಥಾನಮಾನವನ್ನು ನೀಡಿ ಪೂಜಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾದ ಗೋವುಗಳ ಮಹತ್ವ ಮತ್ತು ಸಂರಕ್ಷಣೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕಾಗಿದೆ.

ದೀಪಾವಳಿ (ಬಲಿಪಾಢ್ಯಮಿ) ಹಬ್ಬದ ನಿಮಿತ್ತ ಬುಧವಾರ ಮುಜರಾಯಿ ದೇವಸ್ಥಾನಗಳಲ್ಲಿ ಗೋವುಗಳಿಗೆ ಸ್ನಾನ ಮಾಡಿಸಿ ಅರಶಿನ ಕುಂಕುಮ ಹೂವುಗಳಿಂದ ಅಲಂಕರಿಸಬೇಕು.

ಅಕ್ಕಿ, ಬೆಲ್ಲ, ಹಣ್ಣು ಮುಂತಾದ ಗೋಗ್ರಾಸವನ್ನು ನೀಡಿ ಸಂಜೆ ಗೋಪೂಜೆ ಕಾರ್ಯಕ್ರಮವನ್ನು ನೆರವೇರಿಸಬೇಕು ಎಂದು ಜಿಲ್ಲಾಧಿಕಾರಿಗಳು, ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಗಳು/ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು/ ಆಡಳಿತಾಧಿಕಾರಿಗಳು/ ಅನುವಂಶಿಕ ಮೋಕ್ಷೆಸರರಿಗೆ ಧಾರ್ಮಿಕ ಮತ್ತು ದತ್ತಿ ಇಲಾಖೆ ಆಯುಕ್ತರು ಆದೇಶಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net