ಶ್ರೀ ಚನ್ನಕೇಶವಸ್ವಾಮಿಗೆ ವಿಶೇಷ ಅಲಂಕಾರ

31blrp4
ಬೇಲೂರಿನ ಶ್ರೀ ಚನ್ನಕೇಶವಸ್ವಾಮಿ ದಿವ್ಯ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಶ್ರೀ ಚನ್ನಕೇಶವಸ್ವಾಮಿ ಹಾಗೂ ಶ್ರೀದೇವಿ-ಭೂದೇವಿ ಅಮ್ಮನವರಿಗೆ ಯುಗಾದಿ ಹಬ್ಬದಂದು ಚಿನ್ನ ಮತ್ತು ವಜ್ರದ ಆಭರಣಗಳನ್ನು ತೊಡಿಸಿ ಸಿಂಗರಿಸಲಾಗಿತ್ತು.
Published on

ಬೇಲೂರು: ಶ್ರೀ ಚನ್ನಕೇಶವಸ್ವಾಮಿ ದಿವ್ಯ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಶ್ರೀ ಚನ್ನಕೇಶವಸ್ವಾಮಿ ಹಾಗೂ ಶ್ರೀದೇವಿ-ಭೂದೇವಿ ಅಮ್ಮನವರಿಗೆ ಯುಗಾದಿ ಹಬ್ಬದ ದಿನದಂದು ಭಾನುವಾರ ಅಭಿಷೇಕದ ನಂತರ ಚಿನ್ನ ಮತ್ತು ವಜ್ರದ ಆಭರಣಗಳನ್ನು ತೊಡಿಸಿ, ವಿವಿಧ ಪುಷ್ಪಗಳಿಂದ ಸಿಂಗರಿಸಿ ಭಕ್ತರ ಸಮ್ಮುಖದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.

ತಾಲೂಕು ಕಚೇರಿಯ ಖಜಾನೆಯಿಂದ ಪೊಲೀಸ್ ಬಿಗಿ ಬಂದೋಬಸ್ತ್‌ನಲ್ಲಿ ದೇಗುಲ ಆಡಳಿತ ಮಂಡಳಿ ಹಾಗೂ ಭಕ್ತರ ಸಮ್ಮುಖದಲ್ಲಿ ಶನಿವಾರ ಅಡ್ಡ ಪಲ್ಲಕ್ಕಿಯಲ್ಲಿ ಚಿನ್ನ ಮತ್ತು ವಜ್ರದ ಆಭರಣಗಳನ್ನು ದೇಗುಲಕ್ಕೆ ತರಲಾಗಿತ್ತು. ಆದರೆ ಭಾನುವಾರ ಯುಗಾದಿ ಹಬ್ಬದಂದು ದೇವರಿಗೆ ವಿಶೇಷ ಅಭಿಷೇಕ ನೆರವೇರಿಸಿದ ನಂತರ ದೇಗುಲದ ಅರ್ಚಕರಾದ ಶ್ರೀನಿವಾಸ ಭಟ್ಟರು, ನರಸಿಂಹಪ್ರಿಯ ಭಟ್ಟ ಅವರ ನೇತೃತ್ವದಲ್ಲಿ ದೇವರಿಗೆ ತೊಡಿಸಲಾಯಿತು. ನಂತರ ಭಕ್ತರು ನೀಡಿದ ವಿವಿಧ ಪುಷ್ಪಗಳನ್ನು ಅರ್ಪಿಸಿ ನೂರಾರು ಭಕ್ತರ ಸಮ್ಮುಖದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ದೇಗುಲ ಆಡಳಿತ ಮಂಡಳಿ ಸದಸ್ಯರು, ಅಡ್ಡೆಗಾರರು, ಭಕ್ತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net