ಬರ ನಿರ್ವಹಣೆಗೆ ವಿಶೇಷ ಒತ್ತು

DC Gurudatt Hegde
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ
Published on

ಶಿವಮೊಗ್ಗ: ಜಿಲ್ಲೆಯಾದ್ಯಂತ ಬರ ನಿರ್ವಹಣೆಗೆ ವಿಶೇಷ ಒತ್ತು ನೀಡಲಾಗುತ್ತಿದೆ. ಈಗಾಗಲೇ 380 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿದೆ. ಅದರಲ್ಲಿ 13 ಹಳ್ಳಿಗಳಲ್ಲಿ ಸ್ಥಿತಿ ಗಂಭೀರವಾಗಿದೆ. ಕುಡಿಯುವ ನೀರಿನ ಸಮಸ್ಯೆ ಇರುವ ಕಡೆ ಬೋರ್‌ವೆಲ್‌ಗಳನ್ನು ಕೊರೆಸಲು ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.

ನಗರದಲ್ಲಿ ಬುಧವಾರ ಸಂವಾದ ನಡೆಸಿದ ಅವರು, ಜಿಲ್ಲಾ ಪಂಚಾಯಿತಿ ಮೂಲಕ ನೀರಿನ ಸಮಸ್ಯೆ ಬಗೆಹರಿಸಲು ವಿಶೇಷ ಒತ್ತು ನೀಡಲಾಗುತ್ತಿದೆ. ನೀರನ್ನು ಅನಗತ್ಯವಾಗಿ ಪೋಲು ಮಾಡುತ್ತಿರುವ ಬಗ್ಗೆ ಶಿವಮೊಗ್ಗ ನಗರ ಭಾಗದಿಂದಲೇ ಹೆಚ್ಚು ದೂರುಗಳು ಬಂದಿವೆ. ಈ ಬಗ್ಗೆ ಗಮನ ಹರಿಸಿ ಕ್ರಮ ಕೈಗೊಳ್ಳಲು ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net