ಜೈಲಿನಲ್ಲಿ ದರ್ಶನ್‌ಗೆ ವಿಶೇಷ ಸೌಲಭ್ಯ: ಸದ್ಯದಲ್ಲಿಯೇ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಕೆ

darshan (4)
Published on

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾಗ ನಟ ದರ್ಶನ್ ಹಾಗೂ ಇತರರಿಗೆ ವಿಶೇಷ ಸೌಲಭ್ಯ ನೀಡಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯದಲ್ಲಿಯೇ ಪೊಲೀಸರು ನ್ಯಾಯಾಲಯಕ್ಕೆ ಚಾರ್ಚ್‌ಶೀಟ್ ಸಲ್ಲಿಸಲಿದ್ದಾರೆ.

ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾಗ ದರ್ಶನ್ ಹಾಗೂ ಇತರರಿಗೆ ವಿಶೇಷ ಸೌಲಭ್ಯ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಮೂರು ಪ್ರತ್ಯೇಕ ಎ್ಐಆರ್ ದಾಖಲಾಗಿತ್ತು. ಇದರ ತನಿಖೆ ಪೂರ್ಣಗೊಳಿಸಿರುವ ಪೊಲೀಸರು ಮುಂದಿನವಾರ ಆರೋಪಪಟ್ಟಿ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಕಾರಾಗೃಹದಲ್ಲಿದ್ದಾಗ ನಟ ದರ್ಶನ್, ರೌಡಿ ವಿಲ್ಸನ್‌ಗಾರ್ಡನ್ ನಾಗ ಹಾಗೂ ಇನ್ನಿತರರು ಬ್ಯಾರಕ್ ಎದುರಿನ ಆವರಣದಲ್ಲಿ ಕುಳಿತು ಒಂದು ಕೈನಲ್ಲಿ ಕಾಫಿ ಕಪ್ ಮತ್ತೊಂದು ಕೈನಲ್ಲಿ ಸಿಗರೇಟ್ ಸೇದುತ್ತಾ ಹರಟೆ ಹೊಡೆಯುತ್ತಿದ್ದ ೆಟೋಗಳು ವೈರಲ್ ಆಗಿತ್ತು. ಈ ಸಂಬಂಧ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಮೂರು ಎ್ಐಆರ್‌ಗಳು ದಾಖಲಾಗಿತ್ತು. ಒಂದು ಪ್ರಕರಣವನ್ನು ಎಸಿಪಿ ನೇತೃತ್ವದಲ್ಲಿ ಮತ್ತೆರಡು ಪ್ರಕರಣಗಳನ್ನು ಇನ್‌ಸ್ಪೆಕ್ಟರ್ ನೇತೃತ್ವದಲ್ಲಿ ತನಿಖೆ ನಡೆಸಲಾಗಿತ್ತು. ತನಿಖಾ ಅಧಿಕಾರಿಗಳು ದರ್ಶನ್ ಹಾಗೂ ಇತರರನ್ನು ವಿಚಾರಣೆಗೊಳಪಡಿಸಿ ಹಲವು ಮಾಹಿತಿಗಳನ್ನು ಸಂಗ್ರಹಿಸಿತ್ತು. ಈ ಎಲ್ಲಾ ಅಂಶಗಳನ್ನು ಕ್ರೂಢೀಕರಿಸಿರುವ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಸೋಮವಾರದ ನಂತರ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net