ವಿದ್ಯಾರ್ಥಿಗಳಿಗೆ ವಿಶೇಷ ಪಾಸಿಂಗ್ ಪ್ಯಾಕೇಜ್ ಕಾರ್ಯಾಗಾರ

10.npk-1
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ ( ಮೀಫ್ ) ವತಿಯಿಂದ ಹೊದವಾಡ ರಫೆಲ್ಸ್ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕೊಡಗು ಘಟಕವನ್ನು ಡಾ. ಮಂತರ್ ಗೌಡ ಉದ್ಘಾಟಿಸಿದರು.
Published on

ನಾಪೋಕ್ಲು : ಇಂದಿನ ಆಧುನಿಕ ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅಗತ್ಯ. ಫಲಿತಾಂಶ ಉತ್ತಮಪಡಿಸಲು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕಾರ್ಯವೈಖರಿಯನ್ನು ಕೊಡಗು ಜಿಲ್ಲೆಗೆ ವಿಸ್ತರಿಸಿರುವುದು ಶ್ಲಾಘನೀಯ ಎಂದು ಮಡಿಕೇರಿ ಶಾಸಕ ಡಾ. ಮಂತರ್‌ಗೌಡ ಹೇಳಿದರು.

ಸಮೀಪದ ಹೊದವಾಡ ರಫೆಲ್ಸ್ ಶಿಕ್ಷಣ ಸಂಸ್ಥೆ ಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ಮೀಫ್) ವತಿಯಿಂದ ಇತ್ತೀಚೆಗೆ ಆಯೋಜಿಸಲಾಗಿದ್ದ ನೂತನ ಕೊಡಗು ಘಟಕದ ಉದ್ಘಾಟನೆ ಮತ್ತು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವಿಶೇಷ ಪಾಸಿಂಗ್ ಪ್ಯಾಕೇಜ್ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಾಗಾರವನ್ನು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಒ ನಿರ್ದೇಶಕ ರಂಗಾಧಾಮಪ್ಪ ಉದ್ಘಾಟಿಸಿ ಮಾತನಾಡಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ತೆಕ್ಕಿಲ್ ಸಮೂಹ ಶಿಕ್ಷಣ ಸಂಸ್ಥೆಗಳ ಗೂನಡ್ಕದ ಟಿ.ಎಂ ಶಾಹಿದ್ ತೆಕ್ಕಿಲ್, ವಿಷಯವಾರು ಪರಿಣಿತರಾದ ಅಶ್ರಫ್ ಮಂಗಳೂರು, ಶರೀಫ್ ನಾರಾವಿ, ಮೀಫ್ ಅಧ್ಯಕ್ಷ ಮೂಸಬ್ಬ ಪಿ. ಬ್ಯಾರಿ ಜೋಕಟ್ಟೆ , ಉಪಾಧ್ಯಕ್ಷ ಕೆ. ಎಂ. ಮುಸ್ತಾಫ ಸುಳ್ಯ, ಮೀಫ್ ಕೊಡಗು ಘಟಕದ ಅಧ್ಯಕ್ಷ ಕೆ.ಎ.ಶಾದಲಿ, ಕಾವೇರಿ ಕಾಲೇಜು ಗೋಣಿಕೊಪ್ಪ ಉಪನ್ಯಾಸಕ ಡಾ. ಲೆಫ್ಟಿನೆಂಟ್ ಅಕ್ರಂ, ಮೀಫ್ ಸದಸ್ಯರಾದ ಪರ್ವೆಝ್ ಅಲಿ, ಶೇಖ್ ರಹಮತ್ ಉಲ್ಲಾ, ಮೊಹಮ್ಮದ್ ಶಹಾಮ್, ನಾಪೋಕ್ಲು, ವಿದ್ಯಾ ಸಂಸ್ಥೆಗಳ ಸುಮಾರು 165 ರಷ್ಟು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net