ಅತ್ತಿಗೋಡು ದೇವಸ್ಥಾನದಲ್ಲಿ ವಿಶೇಷ ಪೂಜೆ

31BTP02
ಮಹದೇಶ್ವರಮಠದ ಕೊಪ್ಪಲು ಗ್ರಾಮದ ಶ್ರೀ ಮಹದೇಶ್ವರ ದೇವಸ್ಥಾನದಲ್ಲಿ ಗ್ರಾಮಸ್ಥರು ವಿಶೇಷ ಪೂಜೆ ಸಲ್ಲಿಸಿದರು.
Published on

ಬೆಟ್ಟದಪುರ: ಅತ್ತಿಗೋಡು ಗ್ರಾಮದ ಮಹದೇಶ್ವರ ಮಠದ ಕೊಪ್ಪಲು ಗ್ರಾಮದ ಶ್ರೀ ಮಹದೇಶ್ವರ ದೇವಸ್ಥಾನದಲ್ಲಿ ದೀಪಾವಳಿ ಹಬ್ಬ ಹಾಗೂ ಅಮಾವಾಸ್ಯೆ ಹಿನ್ನೆಲೆ ಗುರುವಾರ ವಿಶೇಷ ಪೂಜೆ ಸಲ್ಲಿಸಲಾಯಿತು.

ಪ್ರತಿವರ್ಷದಂತೆ ಈ ವರ್ಷವೂ ಬೆಟ್ಟದ ಅಮಾವಾಸ್ಯೆ ಪ್ರಯುಕ್ತ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಂಡು, ಬೆಳಗಿನಿಂದಲೇ ಮಾದಪ್ಪನ ದೇವಸ್ಥಾನದಲ್ಲಿ ರುದ್ರ ಕಳಶ ಸ್ಥಾಪನೆ, ರುದ್ರಾಭಿಷೇಕ, ಅಷ್ಠೋತ್ತರ ಬಿಲ್ವಾರ್ಚನೆ ಹಾಗೂ ಮಹಾಮಂಗಳಾರತಿ ನಡೆಯಿತು. ಬಳಿಕ ಆಗಮಿಸಿದ ಭಕ್ತರಿಗೆ ಅನ್ನ ಸಂತರ್ಪಣೆ ಹಮ್ಮಿಕೊಳ್ಳಲಾಯಿತು. ಬಳಿಕ ಹುಲಿವಾಹನದ ಉತ್ಸವ ನಡೆಸಲಾಯಿತು. ದೇವಸ್ಥಾನದ ಅರ್ಚಕರಾದ ಜಗದೀಶ್ ಶಾಸ್ತ್ರಿ ಹಾಗೂ ಅಂಬರೀಷ್ ಶಾಸ್ತ್ರಿ ನೇತ್ರತ್ವದಲ್ಲಿ ಪೂಜಾ ಕಾರ್ಯಕ್ರಮಗಳು ನಡೆದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net