ಚಂದ್ರಗುತ್ತಿಯಲ್ಲಿ ಹುಣ್ಣಿಮೆ ಪೂಜೆ

19sor4-a
ನೂಲು ಹುಣ್ಣಿಮೆ ಪ್ರಯುಕ್ತ ಸೊರಬದ ಚಂದ್ರಗುತ್ತಿ ಶ್ರೀ ರೇಣುಕಾಂಬಾ ದೇವಸ್ಥಾನಕ್ಕೆ ಆಗಮಿಸಿದ್ದ ಭಕ್ತರು.
Published on

ಸೊರಬ: ಶ್ರಾವಣ ಮಾಸದ ನೂಲು ಹುಣ್ಣಿಮೆ ಪ್ರಯುಕ್ತ ತಾಲೂಕಿನ ಚಂದ್ರಗುತ್ತಿ ಶ್ರೀ ರೇಣುಕಾಂಬಾ ದೇವಸ್ಥಾನಕ್ಕೆ ಸಾವಿರಾರು ಭಕ್ತರು ಸೋಮವಾರ ಆಗಮಿಸಿ ಪೂಜೆ ಸಲ್ಲಿಸಿದರು.

ನಿರಂತರ ಮಳೆ ಬರುತ್ತಿದ್ದರೂ ಭಕ್ತರು ಮೆಟ್ಟಿಲು ಏರಿದರು. ಕ್ಷೇತ್ರದ ಪರಿವಾರ ದೇವತೆಗಳಾದ ನಾಗದೇವತೆ, ಮಾತಂಗಿ, ಕಾಲಭೈರವ, ಪರುಶುರಾಮ, ತ್ರಿಶೂಲ ಭೈರಪ್ಪ ದೇವರಿಗೆ ಹಾಗೂ ತೊಟ್ಟಿಲು ಬಾವಿಗೆ ವಿಶೇಷ ಪೂಜೆ ಸಲ್ಲಿಸಿದರು.
ಶಿಕಾರಿಪುರ, ರಾಣೆಬೆನ್ನೂರು, ಬ್ಯಾಡಗಿ, ಹಿರೇಕೆರೂರು, ಹಾನಗಲ್, ಶಿವಮೊಗ್ಗ, ಭದ್ರಾವತಿ ಸೇರಿ ಉತ್ತರ ಕರ್ನಾಟಕದ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು. ದೇವರ ಹೆಸರಿನಲ್ಲಿ ಭಕ್ತರು ಧಾರ್ಮಿಕ ಸೇವೆ ಹರಕೆ ಸಲ್ಲಿಸಿದರು. ರಥ ಬೀದಿಯ ಅಂಗಡಿಗಳಲ್ಲಿ ವ್ಯಾಪಾರ ವಹಿವಾಟು ಹೆಚ್ಚಿತ್ತು. ಪೊಲೀಸ್ ಇಲಾಖೆ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net