ಉಗ್ರ ಚಟುವಟಿಕೆ ಹತ್ತಿಕ್ಕಲು ವಿಶೇಷ ಕಾರ್ಯಪಡೆ: ಆರ್.ಅಶೋಕ್ ಆಗ್ರಹ

R Ashok
Published on

ಬೆಂಗಳೂರು: ರಾಜ್ಯದಲ್ಲಿ ಭಯೋತ್ಪಾದನಾ ಚಟುವಟಿಕೆಗಳ ನಿಗ್ರಹಕ್ಕೆ ವಿಶೇಷ ಕಾರ್ಯಪಡೆ ರಚಿಸಿ, ಕಠಿಣ ಕ್ರಮಕೈಗೊಳ್ಳಬೇಕು ಎಂದು ಕಾಂಗ್ರೆಸ್ ಸರ್ಕಾರಕ್ಕೆ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದ ಅವರು, ರಾಜ್ಯ ಬಿಜೆಪಿ ಕಚೇರಿಯಲ್ಲಿ ಬಾಂಬ್ ಸ್ಫೋಟಕ್ಕೆ ಉಗ್ರರು ಸಂಚು ಮಾಡಿದ್ದು ಅತ್ಯಂತ ಖಂಡನೀಯ. ಐಟಿ-ಬಿಟಿ ರಾಜಧಾನಿ ಬೆಂಗಳೂರಿನಲ್ಲಿ ಭಯದ ವಾತಾವರಣ ಸೃಷ್ಟಿಸಿ ಆರ್ಥಿಕತೆಯನ್ನು ನಾಶ ಮಾಡಲು ಉಗ್ರರು ಪಿತೂರಿ ಹೂಡಿದ್ದರು ಎಂಬ ಕಳವಳ ವ್ಯಕ್ತಪಡಿಸಿದರು.

ಬಾಂಗ್ಲಾ ದೇಶದಿಂದಲೂ ಹಲವರು ಆಧಾರ್ ಕಾರ್ಡ್ ಪಡೆದು ಬೆಂಗಳೂರಿಗೆ ಬರುತ್ತಿದ್ದಾರೆ. ಇದು, ಭಯೋತ್ಪಾದನಾ ಚಟುವಟಿಕೆ ಹೆಚ್ಚಳಕ್ಕೆ ಕಾರಣವಾಗಲಿದೆ ಎಂಬ ಆತಂಕವಿದೆ. ರಾಜ್ಯದ ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಿ ವಿಶೇಷ ಟಾಸ್ಕ್ ೆರ್ಸ್ ರಚಿಸಬೇಕು ಎಂದರು.

ರಾಜ್ಯಕ್ಕೆ ನುಸುಳಿದ ಬಾಂಗ್ಲಾ ಪ್ರಜೆಗಳನ್ನು ಕೂಡಲೇ ಪತ್ತೆ ಮಾತಿ ಹೊರಗಟ್ಟಬೇಕು. ರಾಜ್ಯದ ಜನರ ಬದುಕು ಭಯೋತ್ಪಾದಕರ ನಿಯಂತ್ರಣಕ್ಕೆ ಹೋಗುವುದನ್ನು ತಡೆಯಲು ಸ್ಪೀಪರ್ ಸೆಲ್‌ಗಳ ಪತ್ತೆ ಕಾರ್ಯ ಚುರುಕುಗೊಳಿಸಬೇಕು ಎಂದರು.

ಭಯೋತ್ಪಾದಕರಿಗೆ ಭಯ ದೂರ

ವಿಧಾನಸೌಧದಲ್ಲಿ ದೇಶ ವಿರೋಧಿ ೋಷಣೆ ಕೂಗಿದವರ ಬಗ್ಗೆ ಕಾಂಗ್ರೆಸ್‌ನ ಕೆಲವು ನಾಯಕರು ನೀಡಿದ ಹೇಳಿಕೆಗಳು, ರಾಮೇಶ್ವರಂ ಕೆೆಯಲ್ಲಿ ಬಾಂಬ್ ಸ್ಫೋಟದ ಬಗ್ಗೆ ತಪ್ಪು ವ್ಯಾಖ್ಯಾದಿಂದ ಭಯೋತ್ಪಾದಕರಲ್ಲಿ ಕರ್ನಾಟಕ ಸುರಕ್ಷಿತವೆಂಬ ಭಾವನೆ ಮೂಡಿಸಿರಬಹುದು ಎಂದು ತಿವಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಉಗ್ರರಿಗೆ ಭಯವೇ ಇಲ್ಲದಂತಾಗಿದೆ. ರಾಮೇಶ್ವರಂ ಕೆೆಯಲ್ಲಿ ಸ್ಫೋಟ ಪ್ರಕರಣದ ತನಿಖೆ ನಡೆಸಿದ ಎನ್‌ಐಎ ಅನೇಕ ಮಹತ್ವದ ಸಂಗತಿಯನ್ನು ಪತ್ತೆ ಹಚ್ಚಿದ್ದು, ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರದಲ್ಲಿ ಬಿಜೆಪಿಗಿಂತಲೂ ಕಾಂಗ್ರೆಸ್ ನಾಯಕರಿಗೆ ಹೆಚ್ಚಿನ ವಿಶ್ವಾಸವಿದೆ. ಅದಕ್ಕಾಗಿ ಸಿಎಂ ಕುರ್ಚಿಗೆ ಸ್ಪರ್ಧೆ ಏರ್ಪಟ್ಟು, ಅಭಿವೃದ್ಧಿ ಕೆಲಸ ಕೇಳುವವರಿಲ್ಲದಂತಾಗಿದೆ ಎಂದು ಆರ್.ಅಶೋಕ್ ಟೀಕಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net