

ಸೊರಬ: ತಾಲೂಕಿನಾದ್ಯಂತ ಜನತೆ ಗೌರಿ-ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.
ಪಟ್ಟಣದಲ್ಲಿ ವಿವಿಧ ಸಂಘಟನೆಗಳು ಗಣಪತಿ ಮೂರ್ತಿ ಪ್ರತಿಷ್ಠಾಪಿಸಿದ್ದರು. ಗ್ರಾಮೀಣ ಭಾಗದಲ್ಲಿ ಮಕ್ಕಳು ಗಣೇಶ ಹಬ್ಬದಂದು ಪಟಾಕಿ ಸಿಡಿಸಿ ಸಂಭ್ರಮದಿಂದ ಆಚರಿಸಿದರು. ತಾಲೂಕಿನ ವಿವಿಧೆಡೆ ತುಂತುರು ಮಳೆ ಸುರಿಯಿತು. ಮಹಿಳೆಯರು ಮನೆಗೆ ಗೌರಿಯನ್ನು ಬರಮಾಡಿಕೊಂಡು ವಿಶೇಷ ಪೂಜೆ ಸಲ್ಲಿಸಿದರು. ಪಟ್ಟಣದಲ್ಲಿ ಸಂಘ ಸಂಸ್ಥೆಗಳು ವೈವಿಧ್ಯಮಯ ಆಕರ್ಷಣೆಯ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪೂಜೆ ನಡೆಸಿದರು.