ಗುಡ್ಡೇನಹಳ್ಳಿ ಶ್ರೀ ಚೌಡಮ್ಮ ದೇವಿಗೆ ವಿಶೇಷ ಪೂಜೆ

IMG20250717123829
 ನಡೆಸಿದ ಅರ್ಚಕ,ತಂಡದವರಿಂದ
Published on

ಬೈಲುಕುಪ್ಪೆ: ಗುಡ್ಡೇನಹಳ್ಳಿ ಶ್ರೀ ಚೌಡಮ್ಮ ದೇವಸ್ಥಾನದ ಆವರಣದಲ್ಲಿ ಚೌಡಮ್ಮ ದೇವಿ ದೇವಸ್ಥಾನ ಟ್ರಸ್ಟ್ ವತಿಯಿಂದ ವಾರ್ಷಿಕ ವಿಶೇಷ ಪೂಜೆ, ಅಗ್ನಿ ಹೋಮ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳನ್ನು ಸೋಮವಾರದಿಂದ ಶುಕ್ರವಾರದವರೆಗೆ ನಡೆಸಲಾಯಿತು.

ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡ್ಡೇನಹಳ್ಳಿ ಗ್ರಾಮದ ಶ್ರೀ ಚೌಡಮ್ಮನ ದೇವಸ್ಥಾನದ ಸಮೀಪದಲ್ಲಿರುವ ಶ್ರೀ ಸಿಡ್ಲು ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನದ ಆವರಣದಲ್ಲಿ. ಸೋಮವಾರ ಮತ್ತು ಮಂಗಳವಾರ ಮುಂಜಾನೆಯಿಂದಲೇ ಅರ್ಚಕ ಮೈಸೂರಿನ ತಿರುಮಲ್ಲ ಮತ್ತು ತಂಡದವರಿಂದ ಗಣಪತಿ ಹೋಮ ಮಹಾಮೃತ್ಯುಂಜಯ ಹೋಮ, ಅಗ್ನಿಹೋಮ, ವಿವಿಧ ವಿಶೇಷ ಪೂಜಾ ಕಾರ್ಯಕ್ರಮಗಳೊಂದಿಗೆ ಮಹಾಮಂಗಳಾರತಿ ನೆರವೇರಿಸಲಾಯಿತು.

ಗುರುವಾರ ಶ್ರೀ ಚೌಡಮ್ಮ ದೇವಸ್ಥಾನದ ಆವರಣದಲ್ಲಿ ಅಗ್ನಿಹೋಮ, ಚಂಡಿಕಾ ಯಾಗ, ವಿವಿಧ ಪೂಜಾ ಕಾರ್ಯಗಳು ನಡೆದವು. ಶುಕ್ರವಾರ ಮುಂಜಾನೆಯಿಂದಲೇ ವಿಶೇಷ ಪೂಜೆಗಳೊಂದಿಗೆ ಹರಕೆ ಹೊತ್ತ ಭಕ್ತಾದಿಗಳು ಸಾಲುಗಟ್ಟಿ ನಿಂತು ಹರಕೆ, ಕಾಣಿಕೆಗಳನ್ನು ಶ್ರದ್ಧಾ ಭಕ್ತಿಯಿಂದ ತೀರಿಸಿದರು. ನಂತರ ಅಭಿಷೇಕ, ಎಡೆ ನೈವೇದ್ಯ ಮಾಡಿ ಮಂಗಳ ವಾದ್ಯಗೋಷ್ಠಿಗಳೊಂದಿಗೆ ಮಹಾಮಂಗಳಾರತಿ ನೆರವೇರಿಸಲಾಯಿತು. ಬಂದಂತ ಸಾವಿರಾರು ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನಡೆಯಿತು.

ಚೌಡಮ್ಮನ ದೇವಸ್ಥಾನದ ಒಳ ಆವರಣವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಅಲ್ಲದೆ ತಾಯಿ ಚೌಡಮ್ಮನಿಗೆ ವಿಶೇಷ ಅಲಂಕಾರ ಮಾಡಿ ಸುಗಂಧರಾಜ, ಗುಲಾಬಿ, ಸೇವಂತಿಗೆ, ಚೆಂಡು ಹೂಗಳಿಂದ ಬಗೆ ಬಗೆಯ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿತ್ತು. ಬೈಲುಕುಪ್ಪೆ ಪೊಲೀಸ್ ಠಾಣೆ ಪಿಎಸ್‌ಐ ರವಿಕುಮಾರ್ ಅವರ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net