

ಕೋಲಾರ: ಜಿಲ್ಲೆಯಲ್ಲಿ ಕೈಗೊಂಡಿರುವ ಜಲ ಜೀವನ್ ಮಿಷನ್ (ಜೆಜೆಎಂ) ಕಾಮಗಾರಿಗಳನ್ನು ಸೋಮವಾರ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಪ್ರವಿಣ್ ಪಿ.ಬಾಗೇವಾಡಿ ಅವರು ಪರಿಶೀಲಿಸಿದರು.
ಕಾಮಗಾರಿಗಳನ್ನು ಪೂರ್ಣಗೊಳಿಸಿ ಸಾರ್ವಜನಿಕರಿಗೆ ನೀರು ಸರಬರಾಜು ಮಾಡಬೇಕು ಹಾಗೂ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಕೋಲಾರ ತಾಲೂಕಿನ ಲ್ಮಸಾಗರ, ವಿಶ್ವನಾಥಪುರ, ಖಾಜಿಕಲ್ಲಹಳ್ಳಿ ಹಾಗೂ ನರಸಾಪುರ ಗ್ರಾಮಗಳಿಗೆ ಭೇಟಿ ನೀಡಿ ಜೆಜೆಎಂ ಕಾಮಗಾರಿ ವೀಸಿದರು.
ಪ್ರಗತಿಯಲ್ಲಿರುವ ಕಾಮಗಾರಿಗಳು ಒಂದು ತಿಂಗಳಲ್ಲಿ ಪೂರ್ಣಗೊಳಿಸಬೇಕು. ಈ ಬಗ್ಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಕಾಮಗಾರಿಗೆ ವೇಗ ನೀಡಬೇಕು ಎಂದು ಇಇ ಅಮರಪ್ಪ ಅವರಿಗೆ ಸೂಚಿಸಿದರು.
ಮನೆ ಮನೆಗೆ ನೀರು ಒದಗಿಸುವ ಉದ್ದೇಶದಿಂದ ಕೈಗೊಂಡಿರುವ ಯೋಜನೆಯು ಮಂದಗತಿಯಲ್ಲಿ ಸಾಗುತ್ತಿರುವುದು, ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳದಿರುವುದು ಹಾಗೂ ಕಾಮಗಾರಿ ಪೂರ್ಣಗೊಳಿಸಿದ ಬಳಿಕ ದುರಸ್ತಿ ಕಾರ್ಯವನ್ನು ಸಮರ್ಪಕವಾಗಿ ಕೈಗೊಳ್ಳದಿರುವ ಬಗ್ಗೆ ವ್ಯಾಪವಾಗಿ ದೂರುಗಳು ಕೇಳಿಬಂದಿದ್ದವು.
ಆ ಹಿನ್ನೆಲೆಯಲ್ಲಿ ಈಗಾಗಲೇ ಹಲವು ಬಾರಿ ಸಭೆಗಳನ್ನು ನಡೆದಿರುವಂತಹ ಸಿಇಒ ಅವರು, ಗುಣಮಟ್ಟ ಹಾಗೂ ದುರಸ್ತಿಗೆ ಆದ್ಯತೆ ನೀಡುವಂತೆ ಸೂಚಿಸಿದ್ದರು. ಇನ್ನು ಖುದ್ದು ಕಾಮಗಾರಿ ನಡೆಯುವ ಸ್ಥಳಕ್ಕೆ ಭೇಟಿ ನೀಡಿದ್ದಂತಹ ಅವರು, ಕಳಪೆ ಕಾಮಗಾರಿ ಕಂಡುಬಂದ ಹಿನ್ನೆಲೆಯಲ್ಲಿ ಕಿರಿಯ ಇಂಜಿನಿಯರ್ ಒಬ್ಬರುನ್ನು ಅಮಾನತುಗೊಳಿಸಿದ್ದರು.
ಇದೀಗ ಜಿಲ್ಲೆಯಾದ್ಯಂತ ಜೆಜೆಎಂ ಕಾಮಗಾರಿಗಳ ಪರಿಶೀಲನೆ ಅಭಿಯಾನವನ್ನು ಆರಂಭಿಸಲಾಗಿದ್ದು, ಜಿಪಂ ಸಿಇಒ, ಉಪಕಾರ್ಯದರ್ಶಿಗಳು ಹಾಗೂ ತಾಲೂಕು ಇಒಗಳು ಸ್ಥಳ ಪರಿಶೀಲನೆ ನಡೆಸುವ ಜತೆಗೆ ಕಾಮಗಾರಿಗೆ ಸಂಬಂಸಿದ ಪರಿಶೀಲನಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದ್ದಾರೆ.
ಲ್ಮಸಾಗರ ಗ್ರಾಮದಲ್ಲಿ ಕಾಮಗಾರಿ ಪೂರ್ಣಗೊಂಡ ಬಳಿಕ ಗುತ್ತಿಗೆದಾರರ ಸಮರ್ಪಕವಾಗಿ ದುರಸ್ತಿ ಕಾಮಗಾರಿ ನಡೆದಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಿಇಒ ಅವರು, ಕೂಡಲೇ ಗುತ್ತಿಗೆದಾರರಿಗೆ ನೋಟಿಸ್ ಜಾರಿಗೊಳಿಸುವಂತೆ ಸೂಚನೆ ನೀಡಿದ್ದಾರೆ.
ಜಿಲ್ಲೆಯ 1,800 ಗ್ರಾಮಗಳಲ್ಲಿ ಜೆಜೆಎಂ ಕಾಮಗಾರಿ ಕೈಗೆತ್ತಿಕೊಂಡಿದ್ದು, ಈಗಾಗಲೇ 500 ಗ್ರಾಮಗಳಲ್ಲಿ ಕಾಮಗಾರಿ ಪೂರ್ಣಗೊಂಡಿದೆ. ಆ ಪೈಕಿ ಈಗಾಗಲೇ 120 ಗ್ರಾಮಗಳಲ್ಲಿ ಮನೆ ಮನೆ ನೀರು ಸರಬರಾಜು ಆಗುತ್ತಿದ್ದು, ನೀರಿನ ಗುಣಮಟ್ಟದ ಕುರಿತು ಸಿಇಒ ಅವರು ಸಾರ್ವಜನಿಕರಿಂದ ಮಾಹಿತಿ ಪಡೆದುಕೊಂಡರು.
ಜತೆಗೆ ನಿರಂತರವಾಗಿ ನೀರಿನ ಗುಣಮಟ್ಟ ಪರೀೆಯಾಗಬೇಕೆಂದು ಅಕಾರಿಗಳಿಗೆ ಸೂಚನೆ ನೀಡಿ, ಜೆಜೆಎಂ ಕಾಮಗಾರಿಯೊಂದಿಗೆ ಓವರ್ಹೆಡ್ ಟ್ಯಾಂಕ್ ಕಾಮಗಾರಿ ಪರಿಶೀಲಸಲಾಗುವುದು ಎಂದು ತಿಳಿಸಿದರು.