

ಲಖನೌ: ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿರುವ ಘಟನೆ ಉತ್ತರಪ್ರದೇಶದ ಘಾಜಿಯಾಬಾದ್ನಲ್ಲಿ ನಡೆದಿದೆ. ಘಟನೆಯೂ ಮೀರತ್-ದೆಹಲಿ ಎಕ್ಸ್ಪ್ರೆಸ್ವೇನಲ್ಲಿ ನಡೆದಿದೆ.
ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ದೆಹಲಿ-ಮೀರತ್ ಎಕ್ಸ್ಪ್ರೆಸ್ವೇನ ಸಿಸಿಟಿವಿ ಕ್ಯಾಮರಾದಲ್ಲಿ ಅಪಘಾತದ ದೃಶ್ಯ ಸೆರೆಯಾಗಿದ್ದು, ವೇಗವಾಗಿ ಚಲಿಸುತ್ತಿದ್ದ ಸರ್ಕಾರಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದಲ್ಲಿರುವ ಹೊಲ ಒಂದರಲ್ಲಿ ಪಲ್ಟಿಯಾಗುತ್ತಿರುವುದನ್ನು ನೋಡಬಹುದಾಗಿದೆ. ಘಟನೆ ಕುರಿತು ತನಿಖೆಗೆ ಆದೇಶಿಲಾಗಿದ್ದು, ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.