ಟೋಲ್ ಪ್ಲಾಜಾ ಡಿವೈಡರ್‌ಗೆ ಕಾರು ಡಿಕ್ಕಿ, ಚಾಲಕ ಸಾವು; ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

Untitled design - 2023-10-14T185300.693
Published on

ಉತ್ತರ ಪ್ರದೇಶ: ಹೆದ್ದಾರಿಯ ಟೋಲ್ ಪ್ಲಾಜಾದ ಗೇಟ್‌ನಲ್ಲಿ ನಿರ್ಮಿಸಲಾಗಿದ್ದ ಡಿವೈಡರ್‌ಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ವರದಿಯಾಗಿದೆ.

ಕಾರು ಚಲಾಯಿಸುತ್ತಿದ್ದ ವ್ಯಕ್ತಿಯನ್ನು 20 ವರ್ಷದ ಆದರ್ಶ್ ಎಂದು ಗುರುತಿಸಲಾಗಿದ್ದು, ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಲಕ್ನೋ-ಸುಲ್ತಾನ್‌ಪುರ ಹೆದ್ದಾರಿಯಲ್ಲಿ ಹೈದರ್‌ಗಢ್ ಟೋಲ್ ಪ್ಲಾಜಾ ಸಮೀಪದ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ಸಂಪೂರ್ಣ ದೃಶ್ಯ ಟೋಲ್​ ಪ್ಲಾಜಾದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಅಪಘಾತ ಸಂಭವಿಸಿದ ಸ್ಥಳಕ್ಕೆ ಧಾವಿಸಿದ ಸ್ಥಳೀಯರು, ಕಾರಿನೊಳಗೆ ಸಿಲುಕಿದ್ದ ಆದರ್ಶ್‌ನನ್ನು ಹೊರತೆಗೆದು ಸಮುದಾಯ ಆರೋಗ್ಯ ಕೇಂದ್ರಕ್ಕೆ (ಸಿಎಚ್‌ಸಿ) ಕರೆದೊಯ್ದಿದ್ದಾರೆ. ಈ ವೇಳೆ ಆತ ಅಪಘಾತದಲ್ಲಿ ಮೃತಪಟ್ಟಿರುವುದು ದೃಢವಾಗಿದೆ. ಟೋಲ್ ಕಾರ್ಮಿಕರ ಪ್ರಕಾರ, ಅಪಘಾತದ ನಂತರ ಕಾರಿನಿಂದ ಹೊಗೆ ಹೊರಬರುತ್ತಿತ್ತು. ಕೂಡಲೇ ರಕ್ಷಣಾ ಕಾರ್ಯಾಚರಣೆ ಆರಂಭಿಸಿ, ಕಾರಿಗೆ ಬೆಂಕಿ ತಗುಲದಂತೆ ನೋಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net