VIDEO | ರಸ್ತೆಬದಿ ಬಲೂನ್​ ಮಾರುತ್ತಿದ್ದ ವ್ಯಾಪಾರಿ ಮೇಲೆ ಹರಿದ ಕಾರು; ವ್ಯಕ್ತಿ ಸ್ಥಳದಲ್ಲೇ ಮೃತ್ಯು!

Untitled design - 2023-10-26T203601.351
Published on

ಉತ್ತರಪ್ರದೇಶದ: ವೇಗದಲ್ಲಿದ್ದ ಮಹೀಂದ್ರ ಸ್ಕಾರ್ಪಿಯೋ ಎಸ್‌ಯುವಿ ಕಾರಿನ ನಿಯಂತ್ರಣ ತಪ್ಪಿ, ರಸ್ತೆಬದಿ ಬಲೂನ್ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಹರಿದ ಭೀಕರ ಅಪಘಾತ ಉತ್ತರಪ್ರದೇಶದ ಮೀರತ್‌ನಲ್ಲಿ ಸಂಭವಿಸಿದೆ. ಘಟನೆಯಲ್ಲಿ ವ್ಯಾಪರಿ ಮೃತಪಟ್ಟಿದ್ದಾರೆ.

ಈ ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಮೀರತ್‌ನ ರೈಲ್ವೇ ಕಾಲೋನಿ ನಿವಾಸಿ ಭಾನು ಎಂದು ಗುರುತಿಸಲಾಗಿದ್ದು, ರಸ್ತೆಬದಿಯಲ್ಲಿ ಬಲೂನ್‌ಗಳನ್ನು ಮಾರಾಟ ಮಾಡುತ್ತಿದ್ದರು.

ಕಾರನ್ನು ವೇಗವಾಗಿ ಚಲಾಯಿಸಿದ್ದರಿಂದ ಕಾರು ನಿಯಂತ್ರಣ ತಪ್ಪಿದ್ದು. ಎರಡು ಬಾರಿ ಪಲ್ಟಿ ಹೊಡೆದು ಲ್ಯಾಂಪ್‌ಪೋಸ್ಟ್‌ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಸ್ಥಳದಲ್ಲಿದ್ದ ವ್ಯಾಪಾರಿ ಬಾನು ಮೇಲೆ ಎಸ್‌ಯುವಿ ಬಿದ್ದಿದೆ. ಅಪಘಾತದ ತೀವ್ರತೆಗೆ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನೊಳಗೆ ಹಲವಾರು ಮದ್ಯದ ಬಾಟಲಿಗಳು ಪತ್ತೆಯಾಗಿದ್ದು, ಚಾಲಕ ಕುಡಿದು ವಾಹನ ಚಲಾಯಿಸಿದ್ದಾನೆ ಎಂದು ಹೇಳಿರುವ ಪೊಲೀಸರು, ಎಸ್​ಯುವಿಯನ್ನು ವಶಪಡಿಸಿಕೊಂಡು, ಹೆಚ್ಚಿನ ತನಿಖೆಯನ್ನು ಕೈಗೊಂಡಿದ್ದಾರೆ.

ಅಪಘಾತದ ಪ್ರಕರಣದಲ್ಲಿ ಚಾಲಕ ಸೇರಿದಂತೆ ಐವರಿಗೆ ಗಾಯಗಳಾಗಿವೆ. ಆದರೆ, ಇನ್ನೂ ಯಾರ ಬಂಧನವೂ ಆಗಿಲ್ಲ ಎಂದು ವರದಿ ತಿಳಿಸಿದೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net