ಸ್ಪೆಲ್ಫಿ, ಪ್ರವಾಸಿ ತಾಣಗಳ ಭೇಟಿಗೆ ನಿರ್ಬಂಧ

Tourist destination restriction
ಪ್ರವಾಸಿ ತಾಣ ನಿರ್ಬಂಧಿಸಿದ ಪೊಲೀಸ್, ಕಂದಾಯ ಇಲಾಖೆ ಅಧಿಕಾರಿಗಳು
Published on

ಶಿವಮೊಗ್ಗ: ಜಿಲ್ಲಾದ್ಯಂತ ಮುಂಗಾರು ಮಳೆ ತೀವ್ರಗೊಂಡಿದೆ. ಇದರಿಂದ ನದಿಗಳು, ಹಳ್ಳಗಳು ತುಂಬಿ ಅಪಾಯಮಟ್ಟವನ್ನು ತಲುಪಿ ಹರಿಯುತ್ತಿದ್ದು, ಅಪಾಯಕಾರಿ ಪ್ರವಾಸಿ ತಾಣಗಳಿಗೆ ಸಾರ್ವಜನಿಕರ ಭೇಟಿಯನ್ನು ನಿರ್ಬಂಧಿಸಲಾಗಿದೆ.

ಸಾರ್ವಜನಿಕರ ಹಿತದೃಷ್ಟಿಯಿಂದ ಅಣೆಕಟ್ಟುಗಳು, ಜಲಪಾತಗಳು ಮತ್ತು ನದಿ ನೀರಿಗೆ ಇಳಿಯುವುದು, ಈಜಾಡುವುದು ಮತ್ತು ಸೆಲ್ಫಿಗಳನ್ನು ತೆಗೆದುಕೊಳ್ಳುವುದು ಹಾಗೂ ನೀರಿನ ಹರಿವು ಕಡಿಮೆಯಾಗುವವರೆಗೆ ಅಪಾಯಕಾರಿ ಪ್ರವಾಸಿ ತಾಣಗಳಿಗೆ ಸಾರ್ವಜನಿಕರ ಭೇಟಿಯನ್ನು ಸಂಭಂದಪಟ್ಟ ಇಲಾಖೆಗಳಿಂದ ನಿಷೇಧಸಲಾಗಿದೆ.
ಈ ಬಗ್ಗೆ ಈಗಾಗಲೇ ಶಿವಮೊಗ್ಗ ಜಿಲ್ಲಾ ಪೊಲೀಸ್‌ಯಿಂದ ಸೂಚನಾ ಫಲಕಗಳನ್ನು ಅಳವಡಿಸಿ ಸಿಬ್ಬಂದಿ ನಿಯೋಜಿಸಲಾಗಿದೆ. ಆದ್ದರಿಂದ ಸಾರ್ವಜನಿಕರು ನೀರಿನ ಹರಿವು ಕಡಿಮೆಯಾಗುವವರೆಗೆ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡದೇ ಸಹಕರಿಸಲು ಮತ್ತು ತುರ್ತು ಸಂದರ್ಭಗಳಲ್ಲಿ ಸಹಾಯಕ್ಕಾಗಿ 112 ಸಹಾಯವಾಣಿಗೆ ಕರೆ ಮಾಡುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net