ಸ್ಪೈಸ್​ಜೆಟ್​ ವಿಮಾನದಲ್ಲಿ ಇಂಧನ ಸೋರಿಕೆ: ಕೊಲ್ಕತ್ತದಲ್ಲಿ ತುರ್ತು ಭೂಸ್ಪರ್ಶ ಮಾಡಿದ ವಿಮಾನ

spice
Published on

ಕೊಲ್ಕತ್ತಾ: ಹಾರಾಟ ನಡೆಸುತ್ತಿದ್ದ ಸ್ಪೈಸ್​ಜೆಟ್​ ವಿಮಾನದಲ್ಲಿ ಇಂಧನ ಸೋರಿಕೆ ಕಂಡುಬಂದ ಕಾರಣ ಕೊಲ್ಕತ್ತಾದಲ್ಲಿ ತುರ್ತು ಭೂಷ್ಪರ್ಶ ಮಾಡಿಸಲಾಗಿದೆ.

ಮುಂಬೈನಿಂದ ಗುವಾಹಟಿಗೆ ಹೊರಟಿದ್ದ ವಿಮಾನದಲ್ಲಿ ಮಾರ್ಗ ಮಧ್ಯದಲ್ಲಿ ಇಂಧನ ಸೋರಿಕೆಯಾಗುತ್ತಿರುವುದು ತಿಳಿದುಬಂದಿದೆ. ಕೂಡಲೇ ವಿಮಾನದ ಕ್ಯಾಫ್ಟನ್​ ಟ್ರಾಫಿಕ್​ ಕಂಟ್ರೋಲ್​ಗೆ ಮಾಹಿತಿ ನೀಡಿದ್ದು, ಕೊಲ್ಕತ್ತಾದಲ್ಲಿ ತುರ್ತು ಭೂಸ್ಪರ್ಶಕ್ಕೆ ಅವಕಾಶ ಕಲ್ಪಿಸಿಕೊಂಡಿದ್ದಾರೆ.

ಬೆಳಗ್ಗೆ 9 ಗಂಟೆಗೆ ವಿಮಾನವು ತುರ್ತು ಭೂಸ್ಪರ್ಶ ಮಾಡಿದ್ದು ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net