

ನವದೆಹಲಿ: ಸಾರ್ವಜನಿಕ ಸ್ಥಳಗಳಲ್ಲಿ ಎಂಜಲು ಉಗಿಯುವುದರಿಂದ, ತಂಬಾಕು ಜಗಿದು ರಸ ಉಗುಳುವುದರಿಂದ ಕರೊನಾ ವೈರಸ್ ಸೋಂಕು ಹಬ್ಬುತ್ತದೆ ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.
ಭಾನುವಾರ ಈ ಹೇಳಿಕೆ ಬಿಡುಗಡೆ ಮಾಡಿರುವ ಸರ್ಕಾರ, ಕರೊನಾ ಸೋಂಕು ಗಾಳಿಯಿಂದ ಹರಡುವುದಿಲ್ಲ ಎಂದು ಸ್ಪಷ್ಪಪಡಿಸಿದೆ.
ದೇಶದಲ್ಲಿ ಕೋವಿಡ್ 19 ಪಿಡುಗು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡದಂತೆ, ಸಾರ್ವಜನಿಕ ಸ್ಥಳಗಳಲ್ಲಿ ಎಂಜಲು ಉಗಿಯದಂತೆ, ತಂಬಾಕು ಆಧಾರಿತ ಪದಾರ್ಥಗಳ ಜಗಿಯದಂತೆ ಸಲಹೆ ನೀಡಿದೆ. ದೇಶದ ಹಿತದೃಷ್ಟಿಯಿಂದ ಈ ಸಲಹೆಗಳನ್ನು ಪಾಲಿಸುವುದು ಮುಖ್ಯವಾಗುತ್ತದೆ ಎಂದು ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ ಅಗರ್ವಾಲ್ ಹೇಳಿದ್ದಾರೆ.
ಉತ್ತರ ಪ್ರದೇಶ ಸರ್ಕಾರ ಈಗಾಗಲೆ ಸಾರ್ವಜನಿಕ ಸ್ಥಳಗಳಲ್ಲಿ ಎಂಜಲು ಉಗಿಯುವುದು, ಧೂಮಪಾನ ಮತ್ತು ತಂಬಾಕು ಪದಾರ್ಥಗಳನ್ನು ಅಗಿದು, ಎಂಜಲು ಉಗಿಯುವುದನ್ನು ನಿಷೇಧಿಸಿದೆ. ಇನ್ನುಳಿದ ರಾಜ್ಯಗಳು ಕೂಡ ಈ ನಿಯಮವನ್ನು ಪಾಲಿಸಬೇಕು ಎಂದು ತಿಳಿಸಿದ್ದಾರೆ.