ಪಿರಿಯಾಪಟ್ಟಣ: ಸೇಂಟ್ ಥಾಮಸ್ ಶಿಕ್ಷಣ ಸಂಸ್ಥೆಗಳ 2023-24 ನೇ ಸಾಲಿನ ಅಂತರ ಶಾಲಾ ಕ್ರೀಡಾಕೂಟದಲ್ಲಿ ಪಿರಿಯಾಪಟ್ಟಣದ ಪುಷ್ಪ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ವಿವಿಧ ಭಾಗಗಳಲ್ಲಿ ಉತ್ತಮ ಸಾಧನೆಗೈದಿದ್ದಾರೆ. ತಾಲೂಕಿನ ಕೊಪ್ಪದ ಭಾರತ ಮಾತಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಇತ್ತೀಚೆಗೆ ಚಾವರ ಕಪ್ ಕ್ರೀಡಾಕೂಟದ ಪ್ರೌಢಶಾಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪುಷ್ಪ ಆಂಗ್ಲ ಮಾಧ್ಯಮ ಶಾಲೆಯ ರಾಜ್ಯ ಪಠ್ಯಕ್ರಮ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿದ್ದಾರೆ. ಹಿರಿಯ ಪ್ರಾಥಮಿಕ ಶಾಲಾ ಬಾಲಕರ ವಿಭಾಗದಲ್ಲಿ ಪುಷ್ಪ ವಿದ್ಯಾ ಸಂಸ್ಥೆಯ ಸಿಬಿಎಸ್‌ಸಿ ವಿಭಾಗದ ವಿದ್ಯಾರ್ಥಿಗಳು ವಾಲಿಬಾಲ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಹಾಗೂ ಬಾಲಕಿಯರ ಥ್ರೋ ಬಾಲ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ವಿಜೇತ ವಿದ್ಯಾರ್ಥಿಗಳನ್ನು ಪುಷ್ಪ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ಡಾ. ಫಾದರ್ ಫಿಲಿಪ್ ಮತ್ತು ಫಾದರ್ ಥಾಮಸ್ ಅಭಿನಂದಿಸಿದರು. ಶಾಲೆಯ ಕ್ರೀಡಾ ತರಬೇತುದಾರರಾದ ರವೀಂದ್ರ, ಚರಣ್, ಜಯಂತಿ, ಮುನೇಶ್ ಮತ್ತು ಶಿಕ್ಷಕರಾದ ಮಂಜುನಾಥ್, ಧ್ರುವಕುಮಾರ್, ಕಿರಣ್ ಸೇರಿದಂತೆ ಇತರರು ಇದ್ದರು.