ಸಮಗ್ರ ವೀರಾಗ್ರಣಿ ಪ್ರಶಸ್ತಿಗೆ ಬಾಜಿನರಾದ ಸರ್ಕಾರಿ ಶಾಲೆ ಮಕ್ಕಳು

23-RNR-03
Published on

ರಾಣೆಬೆನ್ನೂರ: ನಗರದ ತಾಲೂಕಿನ ಗುಡಿಹೊನ್ನತ್ತಿ ಗ್ರಾಮದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ತಾಲೂಕಿನ ಚೌಡಯ್ಯದಾನಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಸಮಗ್ರ ವೀರಾಗ್ರಣಿ ಪ್ರಶಸ್ತಿಗೆ ಬಾಜಿನವಾಯಿತು.
24 ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ಚೌಡಯ್ಯದಾನಪುರ ಶಾಲೆಯ ವಿದ್ಯಾರ್ಥಿಗಳು 10 ಪ್ರಥಮ, 4 ದ್ವಿತೀಯ, 4 ತೃತೀಯ ಸ್ಥಾನ ಪಡೆದು ಒಟ್ಟು 18 ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ ಎಂದು ಶಾಲೆಯ ಮುಖ್ಯ ಶಿಕ್ಷಕರು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net