ಜೆಜಿ ಕಾಲೇಜಿನಲ್ಲಿ ಕ್ರೀಡಾಪಟುಗಳಿಗೆ ಸನ್ಮಾನ

Published on

ಹುಬ್ಬಳ್ಳಿ: ನಗರ ಜೆ.ಜಿ. ವಾಣಿಜ್ಯ ಮಹಾವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಾಧನೆ ಮಾಡಿದ ಕ್ರೀಡಾ ಪಟುಗಳಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಇಟಲಿಯಲ್ಲಿ ಇತ್ತೀಚೆಗೆ ನಡೆದ ವಿಶ್ವ ಸ್ಕೇಟಿಂಗ್ ಚಾಂಪಿಯನ್​ಶಿಪ್​ನಲ್ಲಿ ಪದಕ ಪಡೆದ ತ್ರಿಶಾ ಜಡಾಲ ಮತ್ತು ಮಲೇಷಾ ಕರಾಟೆಯಲ್ಲಿ ಬೆಳ್ಳಿ ಪದಕ ಪಡೆದ ವಿನಯ ವೈ.ಎಚ್. ಅವರನ್ನು ಸನ್ಮಾನಿಸಲಾಯಿತು.

ಕಾಲೇಜಿನ ನಿತಿನ್ ಹುಟಗಿ ಕರಾಟೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಮಿಂಚಿದ್ದಾರೆ. ನಿಶ್ಚಿತ್ ಹುಲ್ಲೂರು, ಜಾಹ್ನವಿ ಪಪ್ಪು ಅವರನ್ನು ಗೌರವಿಸಲಾಯಿತು.

ಕೆಎಲ್​ಇ ನಿರ್ದೇಶಕ ಶಂಕರಣ್ಣ ಮುನವಳ್ಳಿ ಮಾತನಾಡಿ, ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು.

ಸ್ಥಾನಿಕ ಮಂಡಳಿ ಸದಸ್ಯ ಬಾಬಾ ಭೂಸದ ಮಾತನಾಡಿದರು. ಎಂ.ಆರ್. ಪಾಟೀಲ ಅವರು ಕ್ರೀಡಾಪಟುಗಳಿಗೆ ನಗದು ಬಹುಮಾನ ಘೋಷಿಸಿದರು.

ಪ್ರಾಚಾರ್ಯ ಪ್ರೊ. ಎಸ್.ಎಲ್. ಪಾಟೀಲ, ದೈಹಿಕ ಶಿಕ್ಷಣ ನಿರ್ದೇಶಕ ಎಂ.ಡಿ. ಪಾಟೀಲ ಉಪಸ್ಥಿತರಿದ್ದರು.

ಡಾ. ಡಿ.ಕೆ. ವಾಘಮೋಡೆ ಸ್ವಾಗತಿಸಿದರು, ಪ್ರೊ. ಮಲ್ಲಮ್ಮ ಯಾಟಗಲ್ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net