

ತೆಲಂಗಾಣ: 'ಕಿಸ್'(Kiss) ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ನಟಿ ಶ್ರೀಲೀಲಾ(Sreeleela) ಇದೀಗ ತೆಲುಗು ಚಿತ್ರರಂಗದ ಸ್ಟಾರ್ ನಟರ, ದೊಡ್ಡ ಬ್ಯಾನರ್ಗಳ ಸಿನಿಮಾಗಳಲ್ಲಿ ಫುಲ್ ಬ್ಯುಸಿಯಾಗಿದ್ದಾರೆ.
ಬರೋಬ್ಬರಿ 8 ಚಿತ್ರಗಳಲ್ಲಿ ಅಭಿನಯಿಸುತ್ತಿರುವ ನಟಿ ಶ್ರೀಲೀಲಾ, ಟಾಲಿವುಡ್(Tollywood) ಸ್ಟಾರ್ ನಟರ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯ ಇದೇ ಸಾಲಿನಲ್ಲಿ 'ಅರ್ಜುನ್ ರೆಡ್ಡಿ'(Arjun Reddy) ಖ್ಯಾತಿಯ ನಟ ವಿಜಯ್ ದೇವರಕೊಂಡ(Vijaya Devarakonda) ಅವರಿಗೆ ಹೀರೋಯಿನ್ ಆಗಿ ಅಭಿನಯಿಸುತ್ತಿರುವ ಸುದ್ದಿ ಇದೀಗ ಹೊರಬಿದ್ದಿದೆ.
ಟಾಲಿವುಡ್ ಸೆನ್ಸೇಷನಲ್ ಸ್ಟಾರ್ ವಿಜಯ್ ದೇವರಕೊಂಡ ಜತೆ ನಾಯಕಿಯಾಗಿ ನಟಿಸುತ್ತಿರುವ ಚಿತ್ರಕ್ಕೆ ತಾತ್ಕಾಲಿಕ ಟೈಟಲ್ ಇಟ್ಟಿದ್ದು, 'ವಿಡಿ12'(VD12) ಎಂದು ಹೇಳಲಾಗಿದೆ. ಈ ಚಿತ್ರದ ಚಿತ್ರೀಕರಣ ನಾಳೆಯಿಂದ ಪ್ರಾರಂಭವಾಗಲಿದ್ದು, ಹೈದ್ರಾಬಾದ್ನಲ್ಲಿ ನಡೆಯಲಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ.
'ವಿಡಿ12' ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ ವಿಜಯ್ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದು, ಇದೊಂದು ಮಿಸ್ಟ್ರಿ-ಥ್ರಿಲ್ಲರ್ ಎಂದು ಹೇಳಲಾಗಿದೆ. ಚಿತ್ರದಲ್ಲಿ ಯಾರೆಲ್ಲಾ ನಟಿಸುತ್ತಿದ್ದಾರೆ ಎಂಬ ಮಾಹಿತಿಯನ್ನು ಶೀಘ್ರವೇ ಚಿತ್ರತಂಡ ಪ್ರಕಟಿಸಲಿದೆ.