

ಶಿವಮೊಗ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಗೊಲ್ಲರ ಸಂಘದ ಆಶ್ರಯದಲ್ಲಿ ಶ್ರೀ ಕೃಷ್ಣ ಜಯಂತಿಯನ್ನು ಸೆ.6ರಂದು ಬೆಳಗ್ಗೆ 11ಕ್ಕೆ ಕುವೆಂಪು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಗೊಲ್ಲರ ಸಂಘದ ಅಧ್ಯಕ್ಷ ಅಂಜನಪ್ಪ ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಸಚಿವರಾದ ಶಿವರಾಜ್ ತಂಗಡಗಿ ಮತ್ತು ಡಿ.ಸುಧಾಕರ್ ವಿಶೇಷ ಆಹ್ವಾನಿತರಾಗಿದ್ದು ಶಾಸಕ ಎಸ್.ಎನ್.ಚನ್ನಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಸೇರಿದಂತೆ ಜಿಲ್ಲೆಯ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರುಗಳು ಪಾಲ್ಗೊಳ್ಳುವರು. ಕಾರ್ಯಕ್ರಮಕ್ಕೂ ಮುನ್ನ ನಗರದ ಸೈನ್ಸ್ ಮೈದಾನದಿಂದ ಕುವೆಂಪು ರಂಗಮಂದಿರದವರೆಗೆ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದರು. ಸಂಘದ ಪ್ರಮುಖರಾದ ದೇವೇಂದ್ರಪ್ಪ, ರಾಜು, ಮೋಹನ್, ಶಿವಾನಂದಪ್ಪ ಸುದ್ದಿಗೋಷ್ಠಿಯಲ್ಲಿದ್ದರು.