

ಹೊಳೆನರಸೀಪುರ: ಅರಣ್ಯ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿ ಕಚೇರಿ ವತಿಯಿಂದ ಪಟ್ಟಣದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಬ್ರಹ್ಮ ರಥೋತ್ಸವ ಪ್ರಯುಕ್ತ ವಿಶೇಷ ಪೂಜೆ ಹಾಗೂ ರಥಬೀದಿ ಉತ್ಸವ ವಿಜೃಂಭಣೆಯಿಂದ ಜರುಗಿತು.
ಶ್ರೀ ಲಕ್ಷ್ಮೀ ನರಸಿಂಹಸ್ವಾಮಿಯ ದೇವಾಲಯದಲ್ಲಿ ಮಂಗಳವಾರ ಮುಂಜಾನೆ ಸ್ವಾಮಿಯ ಮೂಲ ಮೂರ್ತಿಗೆ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ, ನೈವೇದ್ಯ, ತಥಿ ಆರಾಧನೆ ಸೇವೆ, ಸಹಸ್ರನಾಮಾರ್ಚನೆ, ಮಂಗಳಾರತಿ ನೆರವೇರಿಸಿದ ನಂತರ ಸ್ವಾಮಿಯ ಉತ್ಸವ ಮೂರ್ತಿಯನ್ನು ಅಡ್ಡೆಯಲ್ಲಿ ಪ್ರತಿಷ್ಠಾಪಿಸಿ, ವಿಶೇಷವಾಗಿ ಅಲಂಕರಿಸಿ ಪೂಜಿಸಲಾಯಿತು. ನಂತರ ರಥ ಬೀದಿಯಲ್ಲಿ ಉತ್ಸವ ನಂತರ ಪ್ರಕಾರೋತ್ಸವ ನೆರವೇರಿಸಿ ಪೂಜಿಸಲಾಯಿತು.
ಶ್ರೀ ಸ್ವಾಮಿಯ ಮೂಲ ಮೂರ್ತಿಗೆ ಮಹಾಮಂಗಳಾರತಿ ನೆರವೇರಿಸಿ, ಭಕ್ತರಿಗೆ ತೀರ್ಥ ಪ್ರಸಾದ ವಿನಿಯೋಗ ಮಾಡಲಾಯಿತು. ಹಿರಿಯ ಅರ್ಚಕರಾದ ರಾಮಸ್ವಾಮಿ ಭಟ್ಟರ ಮಾರ್ಗದರ್ಶನದಲ್ಲಿ ನಾರಾಯಣ ಭಟ್ಟರು, ರಾಮಪ್ರಸಾದ್, ಸಿಂಹಾದ್ರಿ, ವಿಜಯಕುಮಾರ್, ನಾಗರಾಜು, ಪೂಜಾ ಕೈಂಕರ್ಯ ನೆರವೇರಿಸಿದರು.
ವಲಯ ಅರಣ್ಯಾಧಿಕಾರಿಗಳಾದ ದಿಲೀಪ್ ಹಾಗೂ ಶ್ರುತಿ, ಉಪವಲಯ ಅರಣ್ಯಾಧಿಕಾರಿಗಳಾದ ಪ್ರದೀಪ್‌ಕುಮಾರ್, ರುದ್ರೇಶ್ ಹಾಗೂ ಕುಮಾರಸ್ವಾಮಿ, ಸಿಬ್ಬಂದಿ ರಮೇಶ್, ವಿಶ್ವನಾಥ್, ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸೋಮಶೇಖರ್, ಸಹಾಯಕ ಇಂಜಿನಿಯರ್‌ಗಳಾದ ಪ್ರಶಾಂತ್, ಮಲ್ಲಿಕಾರ್ಜುನ್, ಪಾರ್ವತಿ, ಅರುಣ್ ಹಾಗೂ ಆನಂದ್, ಸಿಬ್ಬಂದಿ ಚಂದ್ರಶೇಖರ್, ವಿನಯ್ ಇತರರು ಇದ್ದರು.