

ಕೊಲಂಬೊ: ಶ್ರೀಲಂಕಾದಲ್ಲಿ ಉಂಟಾಗಿರುವ ತೀವ್ರ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಸಾರ್ವಜನಿಕರು ಭಾರಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ ಸೆಂಟ್ರಲ್ ಬ್ಯಾಂಕ್ ಗವರ್ನರ್ ಅಜಿತ್ ನಿವಾರ್ಡ್ ಕ್ಯಾಬ್ರಾಲ್ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸರ್ಕಾರದ ಎಲ್ಲಾ ಸಚಿವರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಸೆಂಟ್ರಲ್ ಬ್ಯಾಂಕ್ ಗವರ್ನರ್ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ. ರಾಜೀನಾಮೆ ಪತ್ರವನ್ನು ಅಧ್ಯಕ್ಷ ಗೋಟಬಯ ರಾಜಪಕ್ಸ ಅವರಿಗೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.
ಈ ಬೆನ್ನಲ್ಲೇ ಪ್ರಧಾನಮಂತ್ರಿ ಮಹಿಂದಾ ರಾಜಪಕ್ಸ ಹೊರತುಪಡಿಸಿ ಸಂಪುಟದ ಎಲ್ಲಾ 26 ಸಚಿವರು ಭಾನುವಾರ ರಾತ್ರಿಯೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದವರಲ್ಲಿ ರಾಜಪಕ್ಸ ಅವರ ಪುತ್ರ ನಮಲ್ ರಾಜಪಕ್ಸ ಕೂಡ ಸೇರಿದ್ದಾರೆ. ಇದೀಗ ಕೇಂದ್ರ ಬ್ಯಾಂಕ್ ಗವರ್ನರ್ ಕೂಡ ರಾಜೀನಾಮೆ ನೀಡಿದ್ದಾರೆ.