

ನವದೆಹಲಿ: ದೇಶಾದ್ಯಂತ ಲಾಕ್ಡೌನ್ ಜಾರಿಗೊಳಿಸುವ ಅಧಿಕಾರವನ್ನು ಕೇಂದ್ರವೀಗ ಆಯಾ ರಾಜ್ಯ ಸರ್ಕಾರಗಳಿಗೆ ನೀಡಿದೆ. ಹೀಗಾಗಿ ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಲಾಕ್ಡೌನ್ ಜಾರಿಗೊಳಿಸಲಾಗುತ್ತಿದೆ.
ಕೇಂದ್ರ ಸರ್ಕಾರ ಜುಲೈ 31ರ ವರೆಗೆ ಶಿಕ್ಷಣ ಸಂಸ್ತೆಗಳನ್ನು ಆರಂಭಿಸುವುದು ಬೇಡ. ಬದಲಾಗಿ ಆನ್ಲೈನ್ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ ಎಮದು ಈಗಾಗಲೇ ಮಾರ್ಗಸೂಚಿಗಳನ್ನು ಹೊರಡಿಸಿದೆ.
ಆದರೆ, 31ರ ನಂತರ ಶಾಲಾ- ಕಾಲೇಜುಗಳ ಆರಂಭವಾಗುತ್ತವೇಯೇ ಎಂಬುದು ಮತ್ತೊಂದು ಪ್ರಶ್ನೆ. ಜತೆಗೆ, ಪ್ರಾಯೋಗಿಕ ನೆಲೆಯಲ್ಲಿ ಆರಂಭಿಸುವ ಸಾಧ್ಯತೆಯೂ ಇಲ್ಲದಿಲ್ಲ.
ಇದೇ ಪ್ರಯೋಗವನ್ನು ನೆರೆಯ ಶ್ರೀಲಂಕಾದಲ್ಲೂ ಮಾಡಲಾಗಿತ್ತು. ವಾರದ ಹಿಂದೆ ಶಾಲಾ- ಕಾಲೇಜುಗಳ ಆರಂಭಕ್ಕೆ ಅಲ್ಲಿನ ಸರ್ಕಾರ ಅನುಮತಿ ನೀಡಿತ್ತು. ಮತ್ತೆ ಕರೊನಾ ಪ್ರಕರಣಗಳು ಹೆಚ್ಚಾಗಿದ್ದರಿಂದ ದೇಶಾದ್ಯಂತ ಶಿಕ್ಷಣಸಂಸ್ಥೆಗಳನ್ನು ಬಂದ್ ಮಾಡುವಂತೆ ಆದೇಶಿಸಿದೆ.
ಅಷ್ಟಕ್ಕೂ ಈ ದ್ವೀಪರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 2,617, ಈವರೆಗೆ 11 ಜನರು ಮೃತಪಟ್ಟಿದ್ದಾರೆ. ಕಳೆದ ಒಮದು ವಾರದಲ್ಲಿ ರಾಜಧಾನಿಯಲ್ಲಿ 1,100ಕ್ಕೂ ಹೆಚ್ಚು ಹೊಸ ಪ್ರಕರಣಗಳು ವರದಿಯಾಗಿವೆ. ಈ ಕಾರಣಕ್ಕೆ ನಿರ್ಬಂಧಗಳನ್ನು ವಿಧಿಸಲಾಗುತ್ತಿದೆ ಎಂದು ಸೇನಾ ಮುಖ್ಯಸ್ಥ ಶವೇಂದ್ರ ಸಿಲ್ವ ಹೇಳಿದ್ದಾರೆ.