

ಬಾಳೆಹೊನ್ನೂರು: ಆಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಸಮೀಪದ ಆದರ್ಶನಗರ ಇಟ್ಟಿಗೆ ಸೀಗೋಡಿನಲ್ಲಿ ಜ.22ರಂದು ವಿಶೇಷ ಪೂಜೆ ಹಾಗೂ ದೀಪಾರಾಧನೆ ಆಯೋಜಿಸಲಾಗಿದೆ ಎಂದು ವಿದ್ಯಾಗಣಪತಿ ಸೇವಾ ಸಮಿತಿ ಅಧ್ಯಕ್ಷ ರಾಘವೇಂದ್ರ ತಿಳಿಸಿದ್ದಾರೆ.
ಅಯೋಧ್ಯೆ ಶ್ರೀರಾಮ ಮಂದಿರ ಲೋಕಾರ್ಪಣೆ, ಬಾಲರಾಮನ ವಿಗ್ರಹ ಪ್ರಾಣ ಪ್ರತಿಷ್ಠೆ ಅಂಗವಾಗಿ ಭಕ್ತಿ ವಿಜಯ - ಭಕ್ತ ಸಂಭ್ರಮ ಎಂಬ ಶೀರ್ಷಿಕೆಯಡಿ ಕಾರ್ಯಕ್ರಮ ಆಯೋಜಿಸಲಾಗಿದೆ. ಸೋಮವಾರ ಸಂಜೆ 6 ಗಂಟೆಗೆ ಶ್ರೀರಾಮ ಭಾವಚಿತ್ರಕ್ಕೆ ವಿಶೇಷ ಪೂಜೆ, ಶ್ರೀರಾಮ ದೀಪಾರಾಧನೆ ಆಯೋಜಿಸಲಾಗಿದೆ.
ಮಾರ್ಕಾಂಡೇಶ್ವರ ದೇಗುಲದ ಅರ್ಚಕ ಕೆ.ಎಸ್.ಪ್ರಕಾಶ್‌ಭಟ್ ಶ್ರೀರಾಮನ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಬಳಿಕ ಭಕ್ತರಿಗೆ ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ. ಈಗಾಗಲೇ ಗಣಪತಿ ಸಮುದಾಯ ಭವನದ ಆವರಣವನ್ನು ಕೇಸರಿ ಬಾವುಟ, ಬಂಟಿಂಗ್ಸ್‌ಗಳಿಂದ ಅಲಂಕರಿಸಿದ್ದು ವಿಶೇಷ ರೀತಿಯಲ್ಲಿ ಕಾರ್ಯಕ್ರಮ ಸಂಯೋಜಿಸಿ ಆಯೋಧ್ಯೆ ರಾಮಮಂದಿರ ಉದ್ಘಾಟನೆಯ ಕ್ಷಣವನ್ನು ಐತಿಹಾಸಿಕ ಮಾಡಬೇಕು ಎಂದು ಗ್ರಾಮಸ್ಥರು, ರಾಮಭಕ್ತರು ನಿರ್ಧರಿಸಿದ್ದಾರೆ ಎಂದು ತಿಳಿಸಿದರು.