ಶ್ರೀ ರಾಮದೂತಂ ಶಿರಸಾ ನಮಾಮಿ…

anjaneya
Published on

ಯಾಗವನ್ನು ಮಾಡಿದನು. ಆಗ ಯಜ್ಞದಿಂದ ಅಗ್ನಿದೇವನು ಪ್ರತ್ಯಕ್ಷನಾಗಿ ದಶರಥನ ರಾಣಿಯರಿಗಾಗಿ ಪಾಯಸವನ್ನು ನೀಡಿದನು. ಇದೇ ವೇಳೆ ದಶರಥನ ರಾಣಿಯರಂತೆಯೇ ತಪಸ್ಸನ್ನು ಮಾಡುವ ಅಂಜನಿಗೂ ಪಾಯಸವು ದೊರಕಿತ್ತು ಮತ್ತು ಅದರಿಂದಲೇ ಮಾರುತಿಯ ಜನ್ಮವಾಗಿತ್ತು ಎನ್ನಲಾಗುತ್ತದೆ. ಆ ದಿನ ಚೈತ್ರ ಪೌರ್ಣಿಮೆಯಾಗಿತ್ತು. ಈ ದಿನವನ್ನೇ ಹನುಮಾನ್ ಜಯಂತಿ ಎಂದು ಆಚರಿಸುತ್ತಾರೆ.

ಕೆಲವು ಪಂಚಾಂಗಗಳ ಪ್ರಕಾರ ಆಶ್ವಯುಜ ಕೃಷ್ಣ ಚತುರ್ದಶಿಯು ಹನುಮಂತನ ಜನ್ಮದಿನವಾಗಿದೆ. ಇನ್ನೂ ಕೆಲವರ ಪ್ರಕಾರ ಚೈತ್ರ ಹುಣ್ಣಿಮೆಯು ಹನುಮ ಹುಟ್ಟಿದ ದಿನ. ಕರ್ನಾಟಕದಲ್ಲಿ ಹನುಮ ಜಯಂತಿಯನ್ನು ಚೈತ್ರ ಹುಣ್ಣಿಮೆಯಂದು ಆಚರಿಸುತ್ತಾರೆ.

ಹನುಮ ಜಯಂತಿಯಂದು ‘ಶ್ರೀ ಹನುಮತೇ ನಮಃ’ ನಾಮಜಪ, ಹಾಗೆಯೇ ಹನುಮಂತನ ಇತರ ಉಪಾಸನೆಯನ್ನು ಭಾವಪೂರ್ಣವಾಗಿ ಮಾಡುವುದರಿಂದ ಹನುಮಂತತತ್ತ್ವದ ಲಾಭವು ಹೆಚ್ಚೆಚ್ಚು ದೊರೆಯಲು ಸಹಾಯವಾಗುತ್ತದೆ.

ಉತ್ಸವ ಆಚರಣೆ ಹೇಗೆ?: ಈ ದಿನ ಹನುಮಂತನ ದೇವಸ್ಥಾನದಲ್ಲಿ ಸೂರ್ಯೋದಯಕ್ಕೆ ಮೊದಲೇ ಕೀರ್ತನೆಯು ಪ್ರಾರಂಭವಾಗುತ್ತದೆ. ಸೂರ್ಯೋದಯಕ್ಕೆ ಕೀರ್ತನೆ ಮುಕ್ತಾಯಗೊಳ್ಳುತ್ತದೆ ಮತ್ತು ಹನುಮಂತನ ಜನ್ಮವಾಗುತ್ತದೆ. ನಂತರ ಮಾರುತಿಯ ಮೂರ್ತಿಯನ್ನು ಪೂಜಿಸುತ್ತಾರೆ

ಸರ್ವಶಕ್ತಿವಂತ: ಹುಟ್ಟಿದ ಕೂಡಲೇ ಮಾರು ತಿಯು ಸೂರ್ಯನನ್ನು ನುಂಗಲು ಹಾರಿದನು ಎಂಬ ಕಥೆಯಿದೆ. ಇದರಿಂದ ವಾಯು ಪುತ್ರನು ಸೂರ್ಯನನ್ನು ಜಯಿಸುವವನಾಗಿದ್ದನು ಎನ್ನುವುದು ತಿಳಿಯುತ್ತದೆ. ಪಂಚಭೂತಗಳಲ್ಲಿ ವಾಯುತತ್ತ್ವವು ತೇಜ ತತ್ತ್ವಕ್ಕಿಂತಲೂ ಹೆಚ್ಚು ಸೂಕ್ಷ್ಮ, ಅಂದರೆ ಹೆಚ್ಚು ಶಕ್ತಿಯುಳ್ಳದ್ದಾಗಿದೆ. ಎಲ್ಲ ದೇವತೆಗಳಲ್ಲಿ ಮಾರುತಿಗೆ ಮಾತ್ರ ಕೆಟ್ಟ ಶಕ್ತಿಗಳು ತೊಂದರೆ ಕೊಡುವುದಿಲ್ಲ ವಂತೆ. ಲಂಕೆಯಲ್ಲಿ ಲಕ್ಷಗಟ್ಟಲೆ ರಾಕ್ಷಸರಿದ್ದರು, ಆದರೆ ಮಾರುತಿಗೆ ತೊಂದರೆ ಕೊಡಲು ಸಾಧ್ಯ ವಾಗಲಿಲ್ಲ. ಆದ್ದರಿಂದ ಮಾರುತಿಗೆ ಭೂತಗಳ ಸ್ವಾಮಿ ಎನ್ನುತ್ತಾರೆ. ಯಾರನ್ನಾದರೂ ಭೂತವು ಹಿಡಿದಿದ್ದರೆ, ಆ ವ್ಯಕ್ತಿಯನ್ನು ಮಾರುತಿಯ ದೇವಸ್ಥಾನಕ್ಕೆ ಒಯ್ಯುತ್ತಾರೆ ಅಥವಾ ಮಾರುತಿ ಸ್ತೋತ್ರವನ್ನು ಪಠಿಸುತ್ತಾರೆ. ಇಲ್ಲವೇ ಅವನ ಮೇಲಿನಿಂದ ತೆಂಗಿನಕಾಯಿಯನ್ನು ನಿವಾಳಿಸಿ ಮಾರುತಿಯ ದೇವಸ್ಥಾನದಲ್ಲಿ ಒಡೆಯುತ್ತಾರೆ. ನಂತರ ಆ ತೆಂಗಿನಕಾಯಿಯನ್ನು ವಿಸರ್ಜನೆ ಮಾಡುತ್ತಾರೆ.

ಜಿತೇಂದ್ರಿಯ: ಸೀತೆಯನ್ನು ಶೋಧಿಸಲು ರಾವಣನ ಅಂತಃಪುರ ದೊಳಗೆ ಪ್ರವೇಶಿಸಿದ ಮಾರುತಿಯ ಮನಃಸ್ಥಿತಿಯು ಅವನ ಉಚ್ಚಚಾರಿತ್ರ್ಯದ ನಿದರ್ಶನವಾಗಿದೆ. ಅವನು ಸ್ವತಃ ಹೇಳು ತ್ತಾನೆ, ನಿಶ್ಚಿಂತೆಯಿಂದ ಬಿದ್ದಿರುವ ಈ ಎಲ್ಲ ರಾವಣನ ಸ್ತ್ರೀಯರನ್ನು ನಾನು ಹೀಗೆ ನೋಡಿರುವುದು ನಿಜ, ಆದರೆಅವರನ್ನು ನೋಡಿ ನನ್ನ ಮನಸ್ಸಿನಲ್ಲಿ ವಿಕಾರವುಂಟಾಗಲಿಲ್ಲ ಎಂದು. ಅನೇಕ ಸಂತರೂ ಈ ಜಿತೇಂದ್ರಿಯ ಮಾರುತಿಯ ಪೂಜೆಯನ್ನು ಮಾಡಿ ಅವನ ಆದರ್ಶವನ್ನು ಸಮಾಜದ ಮುಂದೆ ಇಟ್ಟಿದ್ದಾರೆ.

ಹಿಂದೂ ಧರ್ಮಗ್ರಂಥಗಳಲ್ಲೊಂದಾದ ರಾಮಾಯಣದಲ್ಲಿನ ಪ್ರಮುಖ ಪಾತ್ರಗಳಲ್ಲೊಬ್ಬ ಹಾಗೂ ಹಿಂದು ದೇವತೆಗಳಲ್ಲಿ ಒಬ್ಬ. ವಾಯುಪುತ್ರ, ಕಪಿವೀರನೆಂದು ಕರೆಯಲ್ಪಡುವ ಹನುಮಂತ ಕೇಸರಿ ಎಂಬ ವಾನರ ಮತ್ತು ಅಂಜನಾದೇವಿಯ ಮಗ ಮತ್ತು ರಾಮನ ಪರಮಭಕ್ತ. ಶಕ್ತಿಯ ದೇವತೆಯೆಂದು ಹನುಮಂತನನ್ನು ಪೂಜಿಸಲಾಗುತ್ತದೆ. ಹನುಮಂತ ಕಿಷ್ಕಿಂಧೆಯಲ್ಲಿ ಸುಗ್ರೀವನ ಜೊತೆಯಲ್ಲಿರುತ್ತಾನೆ. ಸೀತೆಯನ್ನು ಹುಡುಕಿಕೊಂಡು ರಾಮ ಕಿಷ್ಕಿಂಧೆಗೆ ಬಂದಾಗ ಹನುಮಂತನಿಗೆ ರಾಮನೊಡನೆ ಭೇಟಿಯಾಗುತ್ತದೆ. ತನ್ನ ಸ್ವಾಮಿಯಾದ ರಾಮನಿಗೆ ಸಹಾಯ ಮಾಡಲು ಮುಂದಾಗುತ್ತಾನೆ.

ನೂರು ಯೋಜನ ವಿಸ್ತಾರದ ಮಹಾ ಸಮುದ್ರವನ್ನು ಹಾರಿ ಸೀತೆಯು ಲಂಕೆಯಲ್ಲಿರುವ ವಿಷಯವನ್ನು ರಾಮನಿಗೆ ತಿಳಿಸುತ್ತಾನೆ. ಮುಂದೆ ರಾವಣನ ಜೊತೆ ಯುದ್ಧ ಮಾಡಿ, ಸೀತೆಯನ್ನು ಲಂಕೆಯಿಂದ ಕರೆದುಕೊಂಡು ಬರಲು ರಾಮನಿಗೆ ಹನುಮಂತ ಹಲವು ವಿಧದಲ್ಲಿ ನೆರವಾಗುತ್ತಾನೆ. ಹನುಮಂತನು ಶಿವನ ಅವತಾರ. ಆದ್ದರಿಂದ ಅವನಲ್ಲಿ ಲಯ ಮಾಡುವ ಸಾಮರ್ಥ್ಯವಿದೆ. ರಾಮನ ಭಕ್ತ. ಹೀಗಾಗಿ ವಿಷ್ಣುವಿನ ತತ್ತ್ವವಿದೆ. ಹೀಗೆ ಹನುಮಂತನಲ್ಲಿ ಬ್ರಾಹ್ಮತೇಜ ಮತ್ತು ಕ್ಷಾತ್ರತೇಜ ಎರಡೂ ಇರುವುದರಿಂದ ಅವಶ್ಯಕತೆಗೆ ಅನುಸಾರ ಅದನ್ನು ಉಪಯೋಗಿಸುತ್ತಾನೆ. ಕೌರವ ಪಾಂಡವರ ಯುದ್ಧದಲ್ಲಿ ಶ್ರೀಕೃಷ್ಣನು ಅರ್ಜುನನ ರಥದ ಮೇಲೆ ಹನುಮಂತನಿಗೆ ಸ್ಥಾನವನ್ನು ನೀಡಿದ್ದ. ಆಗ ಅರ್ಜುನ, ಶ್ರೀಕೃಷ್ಣನ ಮೇಲೆ ಬರುವ ಎಲ್ಲ ಆಯುಧಗಳನ್ನು ಹನುಮಂತನು ನಾಶ ಮಾಡುತ್ತಿದ್ದ. ಒಟ್ಟಾರೆ ಮಾರುತಿಯ ಮಹಿಮೆ ಅಪಾರ. ಬ್ರಹ್ಮಚರ್ಯ, ಧೈರ್ಯ, ಶೌರ್ಯ, ಪಾಂಡಿತ್ಯ ಎಲ್ಲದರ ಮೊತ್ತವಾಗಿರುವ ಶ್ರೀರಾಮದೂತ ಆಂಜನೇಯ ದೇವರನ್ನು ಶಿರಸಾ ನಮಿಸೋಣ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net