ಶ್ರೀ ವಿಶ್ವನಾಥಸ್ವಾಮಿ ಬ್ರಹ್ಮರಥೋತ್ಸವ ಇಂದು

Published on

ಕೊಳ್ಳೇಗಾಲ: ಪ್ರಸನ್ನ ಶ್ರೀ ವಿಶಾಲಾಕ್ಷಿ ಸಮೇತ ಶ್ರೀ ವಿಶ್ಚನಾಥ ಸ್ವಾಮಿ ಬ್ರಹ್ಮರಥೋತ್ಸವ ಮೇ 10 ರಂದು ಪಟ್ಟಣದಲ್ಲಿ ವಿಜೃಂಭಣೆಯಿಂದ ನೆರವೇರಲಿದೆ.

ಪಟ್ಟಣದ ಶ್ರೀ ವಿಶಾಲಾಕ್ಷಿ ಸಮೇತ ಶ್ರೀ ವಿಶ್ಚನಾಥಸ್ವಾಮಿ ದೇವಾಲಯದಲ್ಲಿ ಬ್ರಹ್ಮರಥೋತ್ಸವ ಹಿನ್ನೆಲೆಯಲ್ಲಿ ಮೇ 13 ರವರೆಗೆ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಲಿವೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಶ್ರೀ ವಿಶ್ವನಾಥ ಸ್ವಾಮಿ ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ಕೋರಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net