ಶ್ರೀಕಂಠೇಶ್ವರಸ್ವಾಮಿ ತೆಪ್ಪೋತ್ಸವ ಸಡಗರ

ನಂಜನಗೂಡಿನಲ್ಲಿ ಶ್ರೀಕಂಠೇಶ್ವರ ದೇವಾಲಯದಲ್ಲಿ ಗಿರಿಜಾ ಕಲ್ಯಾಣ ಮಹೋತ್ಸವ ಅಂಗವಾಗಿ ಭಾನುವಾರ ಸಂಜೆ ಕಪಿಲಾ ನದಿಯಲ್ಲಿ ಉತ್ಸವಮೂರ್ತಿಯ ತೆಪ್ಪೋತ್ಸವ ಜರುಗಿತು.
ನಂಜನಗೂಡಿನಲ್ಲಿ ಶ್ರೀಕಂಠೇಶ್ವರ ದೇವಾಲಯದಲ್ಲಿ ಗಿರಿಜಾ ಕಲ್ಯಾಣ ಮಹೋತ್ಸವ ಅಂಗವಾಗಿ ಭಾನುವಾರ ಸಂಜೆ ಕಪಿಲಾ ನದಿಯಲ್ಲಿ ಉತ್ಸವಮೂರ್ತಿಯ ತೆಪ್ಪೋತ್ಸವ ಜರುಗಿತು.
Published on

ನಂಜನಗೂಡು: ಶ್ರೀಕಂಠೇಶ್ವರಸ್ವಾಮಿ ದೇವಾಲಯದಲ್ಲಿ ನಡೆಯುತ್ತಿರುವ ಗಿರಿಜಾ ಕಲ್ಯಾಣ ಮಹೋತ್ಸವ ಅಂಗವಾಗಿ ಭಾನುವಾರ ಸಂಜೆ ಕಪಿಲಾ ನದಿ ತೀರದ ಸ್ನಾನಘಟ್ಟದಲ್ಲಿ ಶ್ರೀಕಂಠೇಶ್ವರಸ್ವಾಮಿ ತೆಪ್ಪೋತ್ಸವ ವಿಜೃಂಭಣೆಯಿಂದ ಜರುಗಿತು.

ಸಂಜೆ 7 ಗಂಟೆ ಸುಮಾರು ಶ್ರೀಕಂಠೇಶ್ವರಸ್ವಾಮಿ ದೇವಾಲಯದಿಂದ ಕಪಿಲಾ ಸ್ನಾನಘಟ್ಟದವರೆಗೆ ಮಂಗಳವಾದ್ಯದೊಂದಿಗೆ ಶ್ರೀಕಂಠೇಶ್ವರಸ್ವಾಮಿ ಉತ್ಸವಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಹೊತ್ತು ತಂದು ಪುಷ್ಪಾಲಂಕಾರ ಹಾಗೂ ವಿದ್ಯುತ್ ದೀಪಗಳಿಂದ ಸಿಂಗರಿಸಲಾಗಿದ್ದ ತೇಲುವ ತೆಪ್ಪದಲ್ಲಿ ಪ್ರತಿಷ್ಠಾಪಿಸಿ ದೇಗುಲದ ಆಗಮಿಕ ಜೆ.ನಾಗಚಂದ್ರ ದೀಕ್ಷಿತ್ ನೇತೃತ್ವದಲ್ಲಿ ಪೂಜೆ ಸಲ್ಲಿಸುವ ಮೂಲಕ ತೆಪ್ಪೋತ್ಸವಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡಲಾಯಿತು. ಕಪಿಲಾ ಸ್ನಾನಘಟ್ಟದ ಆವರಣದಲ್ಲಿ ಪ್ರದಕ್ಷಿಣೆ ಹಾಕಿದ ಬಳಿಕ ತೆಪ್ಪೋತ್ಸವ ಸ್ವಸ್ಥಾನಕ್ಕೆ ಮರಳಿತು. ತುಂತುರು ಮಳೆಯ ನಡುವೆಯೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತರು ತೆಪ್ಪೋತ್ಸವವನ್ನು ಕಣ್ತುಂಬಿಕೊಂಡರು. ಗಿರಿಜಾ ಕಲ್ಯಾಣ ಮಹೋತ್ಸವ ಅಂಗವಾಗಿ ಭಾನುವಾರದಿಂದ ಮಂಗಳವಾರದವರೆಗೆ ನಿತ್ಯ ಸಂಜೆ ಮೂರು ದಿನಗಳ ಕಾಲ ನಿರಂತರವಾಗಿ ತೆಪ್ಪೋತ್ಸವ ನಡೆಯಲಿದ್ದು, ಜುಲೈ 9 ರಿಂದ ನಡೆಯುತ್ತಿರುವ ಗಿರಿಜಾ ಕಲ್ಯಾಣ ಮಹೋತ್ಸವ 16ರ ಮಂಗಳವಾರ ರಾತ್ರಿ ಶಯನೋತ್ಸವದೊಂದಿಗೆ ವಿಧ್ಯುಕ್ತವಾಗಿ ತೆರೆ ಬೀಳಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net