ಶೃಂಗೇರಿಯಲ್ಲಿ 25 ಸಾವಿರಕ್ಕೂ ಅಧಿಕ ಲೀಡ್

bhr umesh
ಟಿ.ಎಂ.ಉಮೇಶ್
Published on

ಬಾಳೆಹೊನ್ನೂರು: ದೇಶದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳು ಮುಂದುವರಿಯಲು ನರೇಂದ್ರ ಮೋದಿ ಅವರ ಆಡಳಿತವೇ ಬೇಕು ಎಂದು ಮತದಾರರು ಈ ಬಾರಿ ಮತ ನೀಡಿದ್ದಾರೆ ಎಂದು ಬಿಜೆಪಿ ಜಿಲ್ಲಾ ರೈತ ಮೋರ್ಚಾ ಕಾರ್ಯದರ್ಶಿ ಟಿ.ಎಂ.ಉಮೇಶ್ ಕಲ್ಮಕ್ಕಿ ಹೇಳಿದ್ದಾರೆ.
ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿಯೂ ಈ ಬಾರಿ ಐತಿಹಾಸಿಕ ಗೆಲುವು ಬಿಜೆಪಿಗೆ ದೊರೆತಿದೆ. ಕ್ಷೇತ್ರದಲ್ಲಿ ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ಸಂಘಟಿತ ಪ್ರಚಾರದ ಶ್ರಮವಾಗಿ ಕೋಟ ಶ್ರೀನಿವಾಸ ಪೂಜಾರಿ ಅದ್ಭುತ ಗೆಲುವನ್ನು ದಾಖಲಿಸಿದ್ದಾರೆ. ಶೃಂಗೇರಿ ಕ್ಷೇತ್ರದಲ್ಲಿ 25 ಸಾವಿರಕ್ಕೂ ಅಧಿಕ ಮತಗಳ ಮುನ್ನಡೆ ಪಡೆದಿದ್ದಾರೆ. ಮತದಾರರ ನಿರೀಕ್ಷೆಯನ್ನು ಹುಸಿಗೊಳಿಸದೆ ಕೋಟ ಅವರು ಕಾರ್ಯನಿರ್ವಹಿಸುವ ವಿಶ್ವಾಸವಿದೆ. ಮಲೆನಾಡು ಭಾಗದ ರೈತರು, ಜನಸಾಮಾನ್ಯರಿಗೆ ಆಗಬೇಕಿರುವ ಕೆಲಸ ಕಾರ್ಯಗಳನ್ನು, ಇಲ್ಲಿನ ಸಮಸ್ಯೆಗಳನ್ನು ಪಟ್ಟಿ ಮಾಡಿ ನೂತನ ಸಂಸದರಿಗೆ ನೀಡಿ ಅಭಿವೃದ್ಧಿ ಬಗ್ಗೆ ಗಮನ ಸೆಳೆಯಲಾಗುವುದು ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net