

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ-2ನೇ ಪುನರಾವರ್ತಿತ ಮತ್ತು ಲಿತಾಂಶ ಉತ್ತಮ ಪಡಿಸಿಕೊಳ್ಳುವ ವಿದ್ಯಾರ್ಥಿಗಳ ನೋಂದಣಿ ದಿನಾಂಕವನ್ನು ಮೇ 21ರವರೆಗೆ ವಿಸ್ತರಿಸಿದೆ. ಈ ಮೊದಲು ಮೇ 19 ಕೊನೆಯ ದಿನವಾಗಿತ್ತು.
ಮಂಡಳಿ ಜಾಲತಾಣದ ಶಾಲಾ ಲಾಗಿನ್ ಮೂಲಕ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕದ ಚಲನ್ ಮುದ್ರಿಸಿಕೊಳ್ಳಲು ಮೇ 24 ಮತ್ತು ಚಲನ್ ಮುದ್ರಿಸಿಕೊಂಡು ಬ್ಯಾಂಕ್ ಖಾತೆಗೆ ಜಮೆ ಮಾಡಲು ನಿಗದಿಪಡಿಸಲು ಮೇ 27 ಕೊನೆಯ ದಿನ ಎಂದು ಮಂಡಳಿಯ ಪ್ರಕಟಣೆ ತಿಳಿಸಿದೆ.