

ಬೆಂಗಳೂರು: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) 2023ನೇ ಸಾಲಿನ ಸ್ಟೆನೋಗ್ರಾಫರ್ ಗ್ರೇಡ್ ಸಿ ಮತ್ತು ಡಿ ಪರೀಕ್ಷೆಗೆ ನಕಾರಾತ್ಮಕ ಅಂಕಗಳ ನಿಯಮಗಳಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಿದೆ. ಅದರಂತೆ, ಈಗ ಪರೀಕ್ಷೆಯಲ್ಲಿ ಪ್ರತಿ ತಪ್ಪು ಉತ್ತರಕ್ಕೆ 0.25 ಅಂಕಗಳನ್ನು ಕಡಿತಗೊಳಿಸಲಾಗುತ್ತದೆ. ಈ ಬಗ್ಗೆ ಆಯೋಗದಿಂದ ಅಧಿಕೃತ ಅಧಿಸೂಚನೆ ಕೂಡ ಜಾರಿಯಾಗಿದೆ. 2023 ರ ಸ್ಟೆನೋಗ್ರಾಫರ್ ಗ್ರೇಡ್ ಸಿ ಮತ್ತು ಡಿ ನೇಮಕಾತಿಗಾಗಿ ನಡೆಸುವ ಕಂಪ್ಯೂಟರ್ ಆಧಾರಿತ ಪರೀಕ್ಷೆಯಲ್ಲಿ ಪ್ರತಿ ತಪ್ಪು ಉತ್ತರಕ್ಕೆ 0.25 ಅಂಕಗಳ ಋಣಾತ್ಮಕ ಅಂಕಗಳನ್ನು ಕಡಿತಗೊಳಿಸಲಾಗುತ್ತದೆ.
ಈ ನೇಮಕಾತಿ ಪರೀಕ್ಷೆಯಲ್ಲಿ ಕಾಣಿಸಿಕೊಳ್ಳಲಿರುವ ಎಲ್ಲಾ ಅಭ್ಯರ್ಥಿಗಳು SSC ಯ ಅಧಿಕೃತ ವೆಬ್‌ಸೈಟ್ ssc.nic.in ಗೆ ಭೇಟಿ ನೀಡುವ ಮೂಲಕ ಅಧಿಸೂಚನೆಯನ್ನು ಪರಿಶೀಲಿಸಲು ಸೂಚಿಸಲಾಗಿದೆ. ಕೆಳಗೆ ನೀಡಲಾದ ನೇರ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೀವು ಅಧಿಕೃತ ಸೂಚನೆಯನ್ನು ಪರಿಶೀಲಿಸಬಹುದು.
ಅರ್ಜಿ ಸಲ್ಲಿಕೆಗೆ ಆಗಸ್ಟ್ 23 ಕೊನೇ ದಿನ
ಎಸ್ಎಸ್ಸಿ ಸ್ಟೆನೋಗ್ರಾಫರ್ ಗ್ರೇಡ್ ಸಿ ಮತ್ತು ಡಿ ನೇಮಕಾತಿ ಪರೀಕ್ಷೆಗೆ ಆನ್‌ಲೈನ್ ಅರ್ಜಿ ನಮೂನೆಯನ್ನು 2023 ಆಗಸ್ಟ್ 02 ರಿಂದ 23 ಆಗಸ್ಟ್ ವರೆಗೆ ಸ್ವೀಕರಿಸಿದೆ. ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿ ಶುಲ್ಕವನ್ನು ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 23. ನೇಮಕಾತಿ ಪರೀಕ್ಷೆಯನ್ನು ಅಕ್ಟೋಬರ್ನಲ್ಲಿ ನಡೆಸಲಾಗುವುದು. ಎಸ್ಎಸ್ಸಿ ಸ್ಟೆನೋಗ್ರಾಫರ್ ಪರೀಕ್ಷೆ ಮೂಲಕ, ಗ್ರೇಡ್ ಸಿ ಯ 93 ಪೋಸ್ಟ್‌ಗಳು ಮತ್ತು ಗ್ರೂಪ್ ಡಿ ಯ 1,114 ಪೋಸ್ಟ್‌ಗಳಿಗೆ ನೇಮಕಾತಿ ಮಾಡಿಕೊಳ್ಳಲಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.