ಎಸ್ಸೆಸ್ಸೆಲ್ಸಿ ಪರೀಕ್ಷೆ-2 ಆರಂಭ: ಎರಡನೇ ಅವಕಾಶಕ್ಕೂ ಇಷ್ಟು ಅಭ್ಯರ್ಥಿಗಳಿದ್ದಾರೆಯೇ!

district koppal sslc exams students
Published on

ಬೆಂಗಳೂರು: ಕಳೆದ ಮಾರ್ಚ್/ಏಪ್ರಿಲ್‌ನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಮತ್ತು ಲಿತಾಂಶ ಸುಧಾರಣೆ ಮಾಡಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಇಂದಿನಿಂದ (ಮೇ26) ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ನಡೆಯಲಿದೆ.

ರಾಜ್ಯಾದ್ಯಂತ 967 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. 3.16 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಮೊದಲ ದಿನ ಪ್ರಥಮ ಭಾಷೆ ಕನ್ನಡ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.15ರವರೆಗೆ ಪರೀಕ್ಷೆ ನಡೆಯಲಿದೆ.

ಎಂದಿನಂತೆಯೇ ವೆಬ್‌ಕಾಸ್ಟಿಂಗ್ ವ್ಯವಸ್ಥೆಯಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆ ನಡೆಸುವ ಸಂಬಂಧ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಮಾರ್ಚ್-ಏಪ್ರಿಲ್‌ನಲ್ಲಿ ನಡೆದ 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1ರಲ್ಲಿ ಪರೀಕ್ಷೆ ಬರೆದಿದ್ದ 8,42,173 ವಿದ್ಯಾರ್ಥಿಗಳಲ್ಲಿ 5,24,984 ಮಕ್ಕಳು ಉತ್ತೀರ್ಣರಾಗುವ ಮೂಲಕ ಶೇ.62.34 ಫಲಿತಾಂಶ ಪ್ರಕಟವಾಗಿತ್ತು. 3,17,189 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದರು. ಬಹುತೇಕ ಎಲ್ಲ ವಿದ್ಯಾರ್ಥಿಗಳು ಪರೀಕ್ಷೆ-2ಕ್ಕೆ ನೋಂದಣಿ ಮಾಡಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net