ಎಸ್​ಎಸ್​ಎಲ್​ಸಿ ಪರೀಕ್ಷೆ ಕೀ ಉತ್ತರ ಪ್ರಕಟ: ಆಕ್ಷೇಪಣೆಗೆ 18 ಕಡೇ ದಿನ

SSLC Key Answer
Published on

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಎಸ್​ಎಸ್​​ಎಲ್​​ಸಿ ಪರೀಕ್ಷೆಗೆ ಸಂಬಂಧಿಸಿದ ಎಲ್ಲ ವಿಷಯಗಳ ಕೀ ಉತ್ತರಗಳನ್ನು ಭಾನುವಾರ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ವಿದ್ಯಾರ್ಥಿಗಳು ಏ.18ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಿದೆ.

ಮಂಡಳಿಯ ವೆಬ್‌ಸೈಟ್‌ https://kseab.karnataka.gov.in/ ನಲ್ಲಿ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು ಈ ಕೀ ಉತ್ತರಗಳನ್ನು ಪರಿಶೀಲಿಸಿ ಮುಂದಿನ ಮೂರು ದಿನಗಳ ಒಳಗೆ ಆನ್‌ಲೈನ್‌ನಲ್ಲಿ ಮಾತ್ರ ಆಕ್ಷೇಪಣೆ ಸಲ್ಲಿಸಬಹುದು.

ಆಕ್ಷೇಪಣೆಗಳನ್ನು ಸಲ್ಲಿಸಲು ಮಂಡಳಿಯ ಅಂತರ್ಜಾಲದಲ್ಲಿ ಲಾಗಿನ್ ಆಗಿ ನೋಂದಣಿ ಸಂಖ್ಯೆಯನ್ನು ದಾಖಲಿಸಬೇಕು. ನೋಂದಾಯಿತ ಮೊಬೈಲ್​​ಫೋನ್​ ಸಂಖ್ಯೆಗೆ ಬರುವ ಒಟಿಪಿ ಬಳಸಿ ಏ.18ರೊಳಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದು ಎಂದು ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net