ಇಂದಿನಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ ಪ್ರಾರಂಭ

SSLC Exam
Published on

ಬೆಂಗಳೂರು: ಇಂದು ಮತ್ತೊಂದು ಶೈಕ್ಷಣಿಕ ಹಬ್ಬ ಶುರುವಾಗಿದ್ದು ಇಂದಿನಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ ಪ್ರಾರಂಭವಾಗಿದೆ.

ಇವತ್ತಿನಿಂದ- ಏಪ್ರಿಲ್ 15ವರೆಗೆ ನಡೆಯಲಿರುವ ಪರೀಕ್ಷೆ ನಡೆಯಲಿದ್ದು ಶಿಕ್ಷಣ ಇಲಾಖೆ ಸಕಲ ಸಿದ್ದತೆ ಮಾಡಿಟ್ಟುಕೊಂಡಿದೆ. ಇಂದು ಪ್ರಥಮ ಭಾಷೆ- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು , ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ ಪರೀಕ್ಷೆ ನಡೆಯಲಿದೆ.

ಒಟ್ಟು 8,42,811 ವಿದ್ಯಾರ್ಥಿಗಳು ನೋಂದಣಿಯಾಗಿದ್ದು ರಾಜ್ಯದಲ್ಲಿ ಒಟ್ಟು 3,305 ಪರೀಕ್ಷಾ ಕೇಂದ್ರಗಳು ಸ್ಥಾಪನೆ ಆಗಿವೆ.

ಇಂದು ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳ ವಿವರ ಹೀಗಿದೆ:

1. ಶಾಲಾ ವಿದ್ಯಾರ್ಥಿಗಳು:- 7,94,611
2. ಪುನರಾವರ್ತಿತ ವಿದ್ಯಾರ್ಥಿಗಳು -20,750
3. ಖಾಸಗಿ ಅಭ್ಯರ್ಥಿಗಳು- 18,272
4. ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು:- 8,859
5. 2010 ಕ್ಕಿಂತ ಹಿಂದಿನ ಸಾಲಿನ ಪುನರಾವರ್ತಿತ ಅಭ್ಯರ್ಥಿಗಳು 301
6. 2010 ಕ್ಕಿಂತ ಹಿಂದಿನ ಸಾಲಿನ ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು 15 ಪರೀಕ್ಷೆಗೆ ನೋಂದಣಿ

ಇನ್ನು ಭದ್ರತಾ ದೃಷ್ಟಿಯಿಂದ ರಾಜ್ಯದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ ಮಾಡಲಾಗಿದ್ದು ಸಿಸಿ ಕ್ಯಾಮೆರಾ ಕಣ್ಗಾವಲು, ಪರೀಕ್ಷಾ ಕೇಂದ್ರದ ಸುತ್ತಲಿನ ಜೆರಾಕ್ಸ್ ಕೇಂದ್ರಗಳನ್ನು ಪರೀಕ್ಷೆಯ ಅವಧಿಯಲ್ಲಿ ಬಂದ್ ಮಾಡಲಾಗಿದೆ.

ವಿದ್ಯಾರ್ಥಿಗಳು ಮೊಬೈಲ್‌ಫೋನ್, ಸ್ಮಾರ್ಟ್‌ವಾಚ್, ಇಯರ್‌ಫೋನ್ ಸೇರಿದಂತೆ ಎಲ್ಲ ರೀತಿಯ ಎಲೆಕ್ಟ್ರಾನಿಕ್ಸ್ ಸಾಧನಗಳನ್ನು ಪರೀಕ್ಷಾ ಕೇಂದ್ರಗಳಲ್ಲಿ ತರದಂತೆ ನಿಷೇಧ ಹೇರಲಾಗಿದೆ. ಬೆಳಗ್ಗೆ 10:30 ರಿಂದ ಮಧ್ಯಾಹ್ನ 1:45ಕ್ಕೆ ಪರೀಕ್ಷೆ ಮುಗಿಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net