ಮೇ 9 ಅಥವಾ 10ರಂದು ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ?

sslc
Published on

ಬೆಂಗಳೂರು: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಮೇ 9 ಅಥವಾ 10ರಂದು ಪ್ರಕಟವಾಗುವ ಸಾಧ್ಯತೆ ಇದೆ ಮೂಲಗಳು ತಿಳಿಸಿವೆ.

ಮೇ 7 ರಂದು ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ 2ನೇ ಹಂತದ ಮತದಾನ ನಡೆಯುವುದರಿಂದ ಫಲಿತಾಂಶ ವಿಳಂಬವಾಗುತ್ತಿದೆ. ಆದರೂ ಸಹ ಇದೇ ವಾರ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ ಎನ್ನಲಾಗಿದೆ.

ಫಲಿತಾಂಶದ ದಿನಾಂಕವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು (ಕೆಎಸ್ ಇಎಬಿ) ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಶಿಕ್ಷಣ ಇಲಾಖೆಯ ವೆಬ್‌ಸೈಟ್ ನಲ್ಲಿ ಕೂಡ ಪ್ರಕಟವಾಗಲಿದೆ. ಜೊತೆಗೆ ಆಯಾ ಶಾಲೆಗಳಲ್ಲಿಯೂ ಫಲಿತಾಂಶ ಪ್ರಕಟವಾಗುತ್ತದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net