ಪರೀಕ್ಷೆ ಕೆಲವೇ ದಿನಗಳಿರುವಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ

Hang vvani
Published on

ಹುಬ್ಬಳ್ಳಿ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸದಾಶಿವನಗರದಲ್ಲಿ ನಡೆದಿದೆ.

ಜ್ಯೋತಿ ರುದ್ರಪ್ಪ ಉಪ್ಪಾರ (16) ಮೃತ ವಿದ್ಯಾರ್ಥಿನಿ. ಇವಳು ಈ ಬಾರಿ ಅಂದರೆ ಜೂ.25ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಬೇಕಿತ್ತು. ಆದರೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಇವಳ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಪರೀಕ್ಷೆಗೆ ಓದಿಲ್ಲದ ಕಾರಣ ಹೆದರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಹಳೇ ಹುಬ್ಬಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net