ಮೇ 8 ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ-1 ಫಲಿತಾಂಶ?

SSLC Exam
Published on

ಬೆಂಗಳೂರು ಎಸ್ಸೆಸ್ಸೆಲ್ಸಿ 2024ರ ಪರೀಕ್ಷೆ-1 ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಮೇ 8ರಂದು ಪ್ರಕಟಿಸುವ ಸಾಧ್ಯತೆಗಳಿವೆ.

ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಫಲಿತಾಂಶದ ಕ್ರೋಢೀಕರಣದ ಕಾರ್ಯ ಬಾಕಿದ್ದು, ಮೇ 8ರಂದು ಪ್ರಕಟಿಸಲು ಮಂಡಳಿ ನಿರ್ಧರಿಸಿದೆ. ಕಂಪ್ಯೂಟರ್ ಕೆಲಸದಲ್ಲಿ ವಿಳಂಬವಾದರೆ ಮಾತ್ರವೇ ಫಲಿತಾಂಶ ಪ್ರಕಟಿಸುವ ದಿನಾಂಕ ಬದಲಾಗುವ ಸಾಧ್ಯತೆ ಇದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯು ಮಾ.25ರಿಂದ ಏ.6ರವರೆಗೆ ನಡೆದಿತ್ತು. 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ನೋಂದಾಯಿಸಿದ್ದರು. 2,750 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net